News Kannada
Wednesday, October 05 2022

ಮೈಸೂರು

ಎರಡು ದಿನಗಳ ಪಾಸ್ಪೋರ್ಟ್ ಸೇವಾ ಶಿಬಿರ: ಜಿ.ಟಿ. ದೇವೇಗೌಡ ಚಾಲನೆ - 1 min read

Photo Credit :

ಎರಡು ದಿನಗಳ ಪಾಸ್ಪೋರ್ಟ್ ಸೇವಾ ಶಿಬಿರ:  ಜಿ.ಟಿ. ದೇವೇಗೌಡ ಚಾಲನೆ

ಮೈಸೂರು: ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಬೆಂಗಳೂರಿನ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಆಯೋಜಿಸಿದ್ದ 2 ದಿನಗಳ ಪಾಸ್ಪೋರ್ಟ್ ಸೇವಾ ಶಿಬಿರಕ್ಕೆ ಶಾಸಕ ಜಿ.ಟಿ. ದೇವೇಗೌಡ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಹಿಂದೆ ಪಾಸ್ಪೋರ್ಟ್ ಪಡೆದುಕೊಳ್ಳಬೇಕಾದರೆ ದೂರದ ದೆಹಲಿ, ಬೆಂಗಳೂರಿಗೆ ಹೋಗಬೇಕಿತ್ತು. ಇದರಿಂದ ಸಮಯ ವ್ಯರ್ಥವಾಗುವುದಲ್ಲದೆ ಗಂಟೆಗಟ್ಟಲೆ ಕ್ಯೂನಲ್ಲಿ ದಣಿಯಬೇಕಿತ್ತು. ಇದೆಲ್ಲವನ್ನು ನಿವಾರಿಸಲೆಂದೇ ಕೇಂದ್ರ ಸರ್ಕಾರದ ನೆರವಿನೊಂದಿಗೆ ಕಳೆದ ಮೂರು ವರ್ಷಗಳಿಂದ ನಗರದಲ್ಲಿ ಪಾಸ್ಪೋರ್ಟ್ ಸೇವಾ ಶಿಬಿರ ಆಯೋಜಿಸಿ ಮನೆ ಬಾಗಿಲಿಗೆ ಪಾಸ್ಪೋರ್ಟ್ ನೀಡುವ ಕೆಲಸ ಮಾಡಲಾಗುತ್ತಿದೆ. ಇಂದು ಪ್ರತಿಯೊಬ್ಬರಿಗೂ ಪಾಸ್ಪೋರ್ಟ್ ನ ಅವಶ್ಯಕತೆ ಇದ್ದು ಶಿಕ್ಷಣ, ಉದ್ಯೋಗ ಸೇರಿದಂತೆ ಇನ್ನಿತರೆ ಕಾರಣಗಳಿಗೆ ವಿದೇಶಗಳಿಗೆ ತೆರಳಬೇಕಾದ ಸಂದರ್ಭ ಬರುತ್ತದೆ. ಸ್ಥಳೀಯವಾಗಿ ಪಾಸ್ಪೋರ್ಟ್ ಸೇವಾ ಕೇಂದ್ರಗಳಿದ್ದರೆ ದೂರದ ಊರುಗಳಿಗೆ ಅಲೆಯುವುದು ತಪ್ಪುತ್ತದೆ. ಮೈಸೂರಿನಿಂದ ಪಾಸ್ಪೋರ್ಟ್ ಗಳಿಗೆ ತುಂಬಾ ಬೇಡಿಕೆಯಿದ್ದು ನಗರದಲ್ಲಿ ಶಾಶ್ವತ ಪಾಸ್ಪೋರ್ಟ್ ಸೇವಾ ಕೇಂದ್ರವನ್ನು ಆರಂಭಿಸಲು ಬೆಂಗಳೂರಿನ ಪ್ರಾದೇಶಿಕ ಕಚೇರಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದರು.

ಬೆಂಗಳೂರಿನ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿಯ ಉಪ ಪಾಸ್ಪೋರ್ಟ್ ಅಧಿಕಾರಿ ಸುಧಿ ಚೌದರಿ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಮೈಸೂರಿನಲ್ಲಿ ಪಾಸ್ಪೋರ್ಟ್ ಸೇವಾ ಶಿಬಿರವನ್ನು ಆಯೋಜಿಸುತ್ತಿದ್ದು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಳೆದ ವರ್ಷ 400 ಮಂದಿ ಅರ್ಜಿ ಸಲ್ಲಿಸಿದ್ದು, ಅವರಲ್ಲಿ 350 ಮಂದಿಗೆ ಪಾಸ್ಪೋರ್ಟ್ ನೀಡಲಾಗಿದೆ. ಭವಿಷ್ಯದಲ್ಲಿ ಇನ್ನೂ ಉತ್ತಮವಾಗಿ ಸೇವೆ ನೀಡಲು ಹಾಗೂ ಮೈಸೂರಿನ ನಾಗರಿಕರ ಬೇಡಿಕೆ ಈಡೇರಿಸಲು ಪರಿಶೀಲನೆಯ ಅವಧಿಯನ್ನು 25 ದಿನಗಳಿಂದ 13 ದಿನಗಳಿಗೆ ಇಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್ಸೈಟ್ ವೀಕ್ಷಿಸಬಹುದು ಎಂದು ಹೇಳಿದರು.

2ದಿನಗಳ ಪಾಸ್ಪೋರ್ಟ್ ಸೇವಾ ಶಿಬಿರದಲ್ಲಿ 400 ಅರ್ಜಿಗಳನ್ನು ಸಲ್ಲಿಸಲು ಅವಕಾಶಗಳಿದ್ದು ದಾಖಲೆಗಳನ್ನು ಪರಿಶೀಲಿಸಿ ಪೊಲೀಸರ ಪರಿಶೀಲನೆಯ ನಂತರ ಅಂಚೆ ಮೂಲಕ 15ರಿಂದ 20ದಿನಗಳಲ್ಲಿ ಪಾಸ್ಪೋರ್ಟ್ ನೀಡಲಾಗುತ್ತದೆ.

ಕಾರ್ಯಕ್ರಮದಲ್ಲಿ ಮೇಯರ್ ಬಿ.ಎಲ್.ಭೈರಪ್ಪ, ಜಿಲ್ಲಾಧಿಕಾರಿ ಡಿ.ರಂದೀಪ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಕಾ.ರಾಮೇಶ್ವರಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯೀಮಾ ಸುಲ್ತಾನ, ಉಪಾಧ್ಯಕ್ಷ ನಟರಾಜ್, ಜಿಲ್ಲಾ ಪಂಚಾಯತ್ ಸಿಇಓ ಶಿವಶಂಕರ್ ಸೇರಿದಂತೆ ಇನ್ನಿತರಿದ್ದರು.

 
 

See also  ಮಂಡ್ಯ ಲೋಕಸಭೆ ಉಪ ಚುನಾವಣೆ: ಶೇ. 53ರಷ್ಟು ಮತದಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು