ಮೈಸೂರು: ವಿಷ್ಣು ಸ್ಮಾರಕಕ್ಕೆ ಗುರಿತಿಸಿರುವ ಜಾಗ ಸರ್ಕಾರಿ ಜಾಗವಾಗಿದ್ದು ಸಾಗುವಳಿದಾರರು ಮಾನವೀಯತೆ ದೃಷ್ಟಿಯಿಂದ ಪರಿಹಾರಕ್ಕೆ ಅರ್ಜಿ ಸಲ್ಲಿಸಬಹುದು. ಆದರೆ ಸ್ಮಾರಕಕ್ಕೆ ಯಾವುದೇ ಭೂ ವಿವಾದ ಇಲ್ಲ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಸ್ಪಷ್ಟ ಪಡಿಸಿದ್ದಾರೆ.
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ರಸ್ತೆಯ ಉದ್ಬೂರು ಬಳಿಯ ಹಾಲಾಳು ಗ್ರಾಮದ ಬಳಿಯ 5 ಎಕರೆ ಸರ್ಕಾರಿ ಭೂಮಿಯಿದ್ದು ಇದನ್ನ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡಲು ಸರ್ಕಾರ ವಾರ್ತಾ ಇಲಾಖೆಗೆ ಈಗಾಗಲೇ ಕಾಯ್ದಿರಿಸಿದ್ದು, ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯ ವಿಷ್ಣುವರ್ಧ ನ್ ಸ್ಮಾರಕಕ್ಕೆ ಶಂಕುಸ್ಥಾಪನೆ ನೇರವೇರಿಸಲು ಜಿಲ್ಲಾಡಳಿತ ಸಿದ್ದತೆ ಮಾಡಿಕೊಂಡಿದ್ದು ಸಿಎಂ ಕಛೇರಿಯಿಂದ ಅಧಿಕೃತ ಸೂಚನೆ ಭಾಕಿ ಇದ್ದು ಈ ಸ್ಮಾರಕ ಸ್ಥಳಕ್ಕೆ ನಾಳೆ ನಾನೇ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆಂದು ಜಿಲ್ಲಾಧಿಕಾರಿಗಳು ಸ್ಪಷ್ಟ ಪಡಿಸಿದರು.
ಹಾಲಾಳು ಗ್ರಾಮದ ಸರ್ಕಾರಿ ಭೂಮಿಯನ್ನ ಕಳೆದ 30 ವರ್ಷಗಳಿಂದ ಸಾಗುವಳ್ಳಿ ಮಾಡುತ್ತಿರುವ ಸಾಗುವಳಿದಾರರು ಭೂಮಿ ಕಿತ್ತುಕೊಂಡರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದು ಈ ಹಿನ್ನಲ್ಲೆಯಲ್ಲಿ ಅವರ ಜೊತೆ ಮಾತುಕತೆ ನಡೆಸಲು ಜಿಲ್ಲಾಡಳಿತ ಸಿದ್ದವಾಗಿದ್ದು ಸಾಗುವಳಿದಾರರು ಪರಿಹಾರಕ್ಕಾಗಿ ಮಾನವೀಯತೆ ದೃಷ್ಟಿಯಿಂದ ಅರ್ಜಿ ಸಲ್ಲಿಸಿದರೆ ಪರಿಗಣಿಸಬಹುದು ಎಂದು ಸ್ಪಷ್ಟ ಪಡಿಸಿದರು.
ಮೈಸೂರು: ಡಿಸೆಂಬರ್ 6ರಂದು ವಿಷ್ಣುವರ್ಧನ್ ಸ್ಮಾರಕಕ್ಕೆ ಮೈಸೂರಿನ ಹಾಲಾಳು ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಖಚಿತ ಪಡಿಸಿದ್ದಾರೆ.
ಜಾಗಾ ವಿವಾದದಿಂದ ಬೆಂಗಳೂರಿನಿಂದ ಮೈಸೂರಿಗೆ ಸ್ಥಳಾಂತರವಾಗಿದ್ದ ವಿಷ್ಣು ಸ್ಮಾರಕವನ್ನು ಮೈಸೂರಿನ ಹೆಚ್.ಡಿ ಕೋಟೆ ರಸ್ತೆಯಲ್ಲಿ ಉದ್ಬೂರ್ ಗೇಟ್ ಬಳಿಯ ಹಾಲಾಳು ಗ್ರಾಮದ 5 ಎಕರೆ ಸರ್ಕಾರಿ ಭೂಮಿಯಲ್ಲಿ ನಿರ್ಮಾಣ ಮಾಡಲು ನಿರ್ಧರಿಸಿತ್ತು, ಆದರೆ ಈ ಸರ್ಕಾರಿ ಭೂಮಿಯನ್ನು ಕಳೆದ 30 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ ಕುಟುಂಬ ಭೂಮಿಯನ್ನು ನೀಡಲು ವಿರೋಧಿಸಿತ್ತು.
ಈ ಹಿನ್ನಲ್ಲೆಯಲ್ಲಿ ಜಿಲ್ಲಾಡಳಿತ ಕುಟುಂಬದೊಂದಿಗೆ ಮಾತುಕತೆ ನಡೆಸಿ ವಿಷ್ಣು ಸ್ಮಾರಕಕ್ಕೆ ಭೂಮಿ ಕೊಡಲು ಒಪ್ಪಿದ್ದು ಡಿಸೆಂಬರ್ 6 ರಂದು ಸಿಎಂ ಸಿದ್ದರಾಮಯ್ಯ ವಿಷ್ಣು ಸ್ಮಾರಕಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಖಚಿತ ಪಡಿಸಿದ್ದಾರೆ. ನಟ ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಡಿಸೆಂಬರ್ 6ರಂದು ವಿಷ್ಣು ಸ್ಮಾರಕ ಪ್ರತಿಷ್ಟಾನ ಆರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂಬ ಮಾಹಿತಿ ಸರ್ಕಾರದ ಉನ್ನತ ಮೂಲಕಗಳಿಂದ ಜಸ್ಟ್ ಕನ್ನಡ ಡಾಟ್ ಇನ್ ಗೆ ಲಭ್ಯವಾಗಿದೆ.
ಮೈಸೂರು ಸಮೀಪದ ಉದ್ಬೂರಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಲಿದೆ. ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಜಾಗದ ವಿವಾದ ಅಡ್ಡಿಯಾಗಿತ್ತು. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಆದರೆ ಬಾಲಕೃಷ್ಣ ಕುಟುಂಬದವರ ಆಂತರಿಕ ಸಮಸ್ಯೆಯಿಂದ ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಅಡ್ಡಿಯಾಗಿತ್ತು. ಇನ್ನೂ ಅಭಿಮಾನ್ ಸ್ಟುಡಿಯೋ ಪಕ್ಕದಲ್ಲೇ ಮತ್ತೊಂದು ಜಾಗವನ್ನ ಸೂಚಿಸಿದ ಸರ್ಕಾರ, ಅದು ಅರಣ್ಯ ಪ್ರದೇಶ ಎಂಬ ಕಾರಣಕ್ಕೆ ಅಲ್ಲಿಯೂ ಸ್ಮಾರಕ ನಿರ್ಮಾಣ ಆಗಲೇ ಇಲ್ಲ.
ಈ ಹಿನ್ನೆಲೆ ಈ ಸಮಸ್ಯೆಗಳೇ ಬೇಡ ಎಂದು ನಟಿ ಭಾರತಿ ವಿಷ್ಣುವರ್ಧನ್ ಅವರು, ಸ್ಮಾರಕವನ್ನು ಮೈಸೂರಿಗೆ ಸ್ಥಳಾಂತರಿಸುವಂತೆ ಮನವಿ ಸಲ್ಲಿಸಿದ್ದರು. ಸರ್ಕಾರ ಕೂಡ ಒಪ್ಪಿಗೆ ನೀಡಿತ್ತು. ಇದೀಗ ಮೈಸೂರಿನಲ್ಲಿ ಸ್ಮಾರಕ ಶಿಲಾನ್ಯಾಸಕ್ಕೆ ಸರ್ಕಾರ ದಿನಾಂಕ ಕೂಡ ನಿಗದಿ ಮಾಡಿದೆ. ಡಿಸೆಂಬರ್ 6 ರಂದು ಸಿಎಂ ಸಿದ್ದರಾಮಯ್ಯ ಉದ್ಬೂರಿನಲ್ಲಿ ಸ್ಮಾರಕ ನಿರ್ಮಾಣ ಕಾರ್ಯಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.