ಮೈಸೂರು: ಕಾಂಗ್ರೆಸ್ ಅಧೋಗತಿಗೆ ಇಳಿದಿಲ್ಲ ಪಕ್ಷದಲ್ಲಿರುವ ನಾಯಕರು ಅಧೋಗತಿಗೆ ಇಳಿದಿದ್ದಾರೆ ಎಂದು ಮಾಜಿ ಸಂಸದ ಹೆಚ್. ವಿಶ್ವನಾಥ ಮೇಟಿ ರಾಸಲೀಲೆ ಪ್ರಕರಣದ ಬಗ್ಗೆ ಪರೋಕ್ಷವಾಗಿ ತಮ್ಮ ಪಕ್ಷದ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಚ್. ವಿಶ್ವನಾಥ ಅವರು ಹೆಚ್.ವೈ. ಮೇಟಿ ರಾಸಲೀಲೆ ಪ್ರಕರಣಕ್ಕೆ ಸಂಬಂಧ ಕ್ರಮ ಕೈಗೊಳ್ಳುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಳಂಬ ಮಾಡಿದ್ದು ಪಕ್ಷಕ್ಕೆ ಡ್ಯಾಮೇಜ್ ಆಗಿದ್ದು ಕಾಂಗ್ರೆಸ್ ಪಕ್ಷ ಬಡವರ ಬಗ್ಗೆ ಧ್ವನಿಯಾಗಿದ್ದು ಇತ್ತೀಚೆಗೆ ಪಕ್ಷ ಸೇರುತ್ತಿರುವ ನಾಯಕರಿಂದ ಪಕ್ಷ ಅಧೋಗತಿಗೆ ಇಳಿಯುತ್ತಿದೆ ಎಂದು ತಮ್ಮ ಅಸಮಾನದಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕಿಂತಲೂ ಮಿಗಿಲಾದದ್ದು, ಪಕ್ಷದ ಹಿತ ದೃಷ್ಟಿಯಿಂದ ಜಿ.ಪರಮೇಶ್ವರ ಯಾವುದಾದರೂ ಒಂದು ಹುದ್ದೆಯನ್ನ ಆಯ್ಕೆ ಮಾಡಿ ಮತ್ತೊಂದು ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಸಲಹೆ ನೀಡಿದರು.
ಕೇಂದ್ರ ಸರ್ಕಾರ ನೋಟುಗಳನ್ನ ಏಕಾಏಕಿ ನಿಷೇದ ಮಾಡಿದ್ದು ಡಾಲರ್ ಎದರು ರೂಪಾಯಿ ಮೌಲ್ಯ ಕುಸಿತ ಕಂಡಿದ್ದು ಇದಕ್ಕೆ ನರೇಂದ್ರ ಮೋದಿ ಅವರೇ ಕಾರಣ, ಸಂಸತ್ ಅಧಿವೇಶನ ಸುಗಮವಾಗಿ ನಡೆಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಬಿಜೆಪಿಯ ಹಿರಿಯ ಮುಖಂಡ ಅಡ್ವಾನಿ ಅವರೇ ಬೇಸರಗೊಂಡಿರುವುದು ಇದಕ್ಕೆ ನಿದರ್ಶನ ಎಂದು ವಿಶ್ವನಾಥ್ ಹೇಳಿದ್ದಾರೆ.