ಮೈಸೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿರುವ ಪತ್ರಕರ್ತರನ್ನು ಗುರುತಿಸಿ ಗೌರವಿಸುವ ಸಲುವಾಗಿ ಬೆಂಗಳೂರು ಪ್ರೆಸ್ಕ್ಲಬ್ ಆಶ್ರಯದಲ್ಲಿ ಕೊಡಮಾಡುವ ’ಜೀವಮಾನ ಸಾಧನಾ ಪ್ರಶಸ್ತಿ’ಗೆ ಮೈಸೂರಿನ ಹಿರಿಯ ಪತ್ರಕರ್ತ ಹಾಗೂ ಕನ್ನಡಪ್ರಭ ಪತ್ರಿಕೆಯ ಸಹಾಯಕ ಸಂಪಾದಕರಾದ ಅಂಶಿ ಪ್ರಸನ್ನಕುಮಾರ್ ಅವರು ಭಾಜನರಾಗಿದ್ದಾರೆ.
2016ನೇ ಸಾಲಿನ ಪ್ರಶಸ್ತಿಗೆ ಅಂಶಿ ಪ್ರಸನ್ನಕುಮಾರ್ ಅವರ ಆಯ್ಕೆ ನಡೆದಿದ್ದು, ಕಳೆದ ಕೆಲ ದಶಕಗಳ ಕಾಲ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಲಾಗಿರುವ ಅನುಪಮ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಪ್ರಕಟಣೆ ತಿಳಿಸಿದೆ.
ಡಿ.31ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಂಶಿ ಪ್ರಸನ್ನಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್ ಸೇರಿದಂತೆ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಪ್ರಶಸ್ತಿಗೆ ಭಾಜನರಾಗಿರುವ ಅಂಶಿ ಪ್ರಸನ್ನಕುಮಾರ್ ಅವರನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಮನಃಪೂರ್ವಕವಾಗಿ ಅಭಿನಂದಿಸಿ, ಅವರ ಭವಿಷ್ಯ ಮತ್ತಷ್ಟು ಉಜ್ವಲವಾಗಲಿ ಎಂದು ಹಾರೈಸಲಿದೆ.