ಮೈಸೂರು: ಜಯಲಕ್ಷ್ಮಿಪುರಂ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಮತ್ತು ದೇಜಗೌ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಕುವೆಂಪು ಅವರ 113ನೇ ಜಯಂತಿ ಮತ್ತು ವಿಶ್ವಮಾನವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಜಯಲಕ್ಷ್ಮಿಪುರಂನ ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ನಲ್ಲಿರುವ ಶ್ರೀವೆಂಕಣ್ಣಯ್ಯ ವೇದಿಕೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಾಜಿ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ವಿಶ್ವಮಾನವ ಪ್ರಶಸ್ತಿಯನ್ನು ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿಗಳಾದ ಕಡಿದಾಳ್ ಪ್ರಕಾಶ್, ಸಾವಿತ್ರಮ್ಮ ದೇಜಗೌ ಮಹಿಳಾ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸಬಿಹಾ ಭೂಮಿಗೌಡ, ದಿ.ಹೆಚ್.ಕೆ.ವೀರಣ್ಣಗೌಡ ಪತ್ರಿಕೋದ್ಯಮ ಪ್ರಶಸ್ತಿಯನ್ನು ವಿಜಯಲಕ್ಷ್ಮಿ ಶಿಬರೂರು ಅವರಿಗೆ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಹಿರಿಯ ಸಾಹಿತಿ ಡಾ. ಸಿಪಿಕೆ, ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಅಧ್ಯಕ್ಷ ಡಾ. ಜೆ. ಶಶಿಧರ ಪ್ರಸಾದ್, ಕುವೆಂಪು ವಿದ್ಯಾಪರಿಷತ್ ನ ಚೇರ್ಮನ್ ಡಾ.ಡಿ.ಕೆ. ರಾಜೇಂದ್ರ ಉಪಸ್ಥಿತರಿದ್ದರು.