ಮೈಸೂರು: ವೀಕೆಂಡ್ ಜೊತೆಯಲ್ಲಿಯೇ ಹೊಸ ವರ್ಷದ ಆಚರಣೆಯೂ ನಡೆಯುತ್ತಿರುವುದರಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಹೀಗಾಗಿ ವಾಹನ ದಟ್ಟಣೆ ಹೆಚ್ಚಾಗುವ ಕಾರಣ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ತಲೆದೋರಿದ್ದು, ಇದನ್ನು ತಪ್ಪಿಸುವ ಸಲುವಾಗಿ ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ.
ನಗರದಲ್ಲಿ ಈಗಾಗಲೇ ಹೋಟೆಲ್ ಸೇರಿದಂತೆ ರೆಸಾಟರ್್ಗಳು ಪ್ರವಾಸಿಗರಿಂದ ಭತರ್ಿಯಾಗಿದೆ. ಪ್ರತಿಷ್ಠಿತ ಹೋಟೆಲ್ಗಳಲ್ಲಿ ವಷರ್ಾಚರಣೆಗಾಗಿಯೇ ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಅಲಂಕಾರಗಳಿಂದ ಕಂಗೊಳಿಸುತ್ತಿವೆ. ಪೊಲೀಸರು ವಷರ್ಾಚರಣೆ ನೆಪದಲ್ಲಿ ದಾಂಧಲೆ, ಕಿರುಕುಳ ನೀಡುವವರ ವಿರುದ್ಧ ಕ್ರಮಕೈಗೊಳ್ಳಲು ಸಜ್ಜಾಗಿದ್ದು, ಕೆಲವು ನಿಬಂಧನೆಗಳನ್ನು ವಿಧಿಸಿದ್ದು ಅದನ್ನು ಮೀರಿದರೆ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಪುಂಡ ಪೋಕರಿಗಳು ಏನಾದರೂ ತೊಂದರೆ ನೀಡಿದಲ್ಲಿ 0821-2418339, 0821-2418139, 100ಗೆ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ನಗರ ಪೊಲೀಸ್ ಕಮೀಷ್ನರ್ ಸುಬ್ರಹ್ಮಣ್ಯೇಶ್ವರರಾವ್ ಅವರು ತಿಳಿಸಿದ್ದಾರೆ.
ಇನ್ನು ಜ.1ರಂದು ನಗರದಲ್ಲಿ ಬೀಡುಬಿಟ್ಟಿರುವ ಪ್ರವಾಸಿಗರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿರುವ ಕಾರಣ ವಾಹನದಟ್ಟಣೆ ಹೆಚ್ಚಾಗಿ ಟ್ರಾಫಿಕ್ಜಾಮ್ ತಡೆಯುವ ಸಲುವಾಗಿ ಚಾಮುಂಡಿಬೆಟ್ಟಕ್ಕೆ ತೆರಳುವ ಎಲ್ಲ ರೀತಿಯ ಖಾಸಗಿ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.
ಚಾಮುಂಡಿಬೆಟ್ಟಕ್ಕೆ ತೆರಳುವ ಪ್ರವಾಸಿಗರು ಹಾಗೂ ಭಕ್ತರು ತಮ್ಮ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳನ್ನು ಲಲಿತಮಹಲ್ ಹೆಲಿಪ್ಯಾಡ್ ಬಳಿ ನಿಲುಗಡೆ ಮಾಡಿ ಅಲ್ಲಿಂದ ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ತೆರಳಲು ವ್ಯವಸ್ಥೆ ಮಾಡಿದ್ದಾರೆ. ಒಬ್ಬರಿಗೆ ವೋಲ್ವೋ ಬಸ್ಸಿನಲ್ಲಿ ರೂ 20, ಸಾಮಾನ್ಯ ಬಸ್ಸಿನಲ್ಲಿ ರೂ.15ನ್ನು ನಿಗದಿಪಡಿಸಲಾಗಿದೆ.
ಈ ಬಾರಿ ಅರಮನೆಯಲ್ಲಿ ದೀಪಬೆಳಗುವ ಮೂಲಕ ರಾತ್ರಿ 12ಕ್ಕೆ ಹೊಸವರ್ಷವನ್ನು ಸ್ವಾಗತಿಸಲು ಅರಮನೆ ಮಂಡಳಿ ಮುಂದಾಗಿದೆ. ಇದೇ ಸಂದರ್ಭ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.