ಹುಣಸೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು, ಮೂವರು ಮಹಿಳೆಯರನ್ನು ರಕ್ಷಿಸಿ, ಐವರು ಯುವಕರನ್ನು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಬಂಧಿತರನ್ನು ಕೇರಳ ಮೂಲದ ಕಣ್ಣನೂರು ತಾಲ್ಲೂಕಿನ ಅನು, ಅನಿಲ್ ಅಗಸ್ಟನ್, ಕೆ.ಪಿ.ರಫೀ, ಅಬ್ದುಲ್ ನಾಸೀರ್, ಅನಿಲ್ ಕುಮಾರ್ ಎಂದು ಗುರುತಿಸಲಾಗಿದೆ. ಹುಣಸೂರು ಪಟ್ಟಣದ ಬಾಲಾಜಿ ಪ್ಯಾಲೇಸ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಮೂವರು ಮಹಿಳೆಯರನ್ನು ರಕ್ಷಣೆ ಮಾಡಿ, ಐವರು ಯುವಕರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ವೇಶ್ಯಾವಾಟಿಕೆ ನಡೆಸಲು ಸಹಕರಿಸಿದ ಲಾಡ್ಜ್ ಮಾಲೀಕ ತಲೆಮರೆಸಿಕೊಂಡಿದ್ದು, ಇವರಿಬ್ಬರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.