ಮೈಸೂರು: ಮೈಸೂರಿನಲ್ಲಿ ಸೋಮವಾರ ಕಾಪರ್ಡ ಭವನ ಮುಂಭಾಗ ಸುಮಾರು ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೆಲವು ಕಾಲೇಜುಗಳು ವಿಶ್ವವಿದ್ಯಾನಿಲಯದ ಶತಮಾನೋತ್ಸವ ಆಚರಣೆಗೆ ಕಟ್ಟಬೇಕಿದ್ದ ಶುಲ್ಕ ಹಾಗೂ ಇನ್ನಿತರ ಶುಲ್ಕವನ್ನು ಪಾವತಿಸಿಲ್ಲ. ಅದಕ್ಕಾಗಿ ಅಂತಹ ಕಾಲೇಜುಗಳು ಶುಲ್ಕ ಪಾವತಿ ಮಾಡುವ ತನಕ ಫಲಿತಾಂಶವನ್ನು ಪ್ರಕಟಿಸುವುದಿಲ್ಲ ಎಂದು ಹೇಳುತ್ತಿರುವುದು ಎಷ್ಟು ಸರಿ. ಮೈಸೂರು ವಿಶ್ವವಿದ್ಯಾನಿಲಯದ ಇಂತಹ ನಡವಳಿಕೆಯಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಆದ್ದರಿಂದ ವಿಶ್ವವಿದ್ಯಾನಿಲಯವು ತಡೆ ಹಿಡಿದರಿರುವ ಪದವಿ ಫಲಿತಾಂಶವನ್ನು ಕೂಡಲೇ ಪ್ರಕಟಿಸಬೇಕೆಂದು ಆರೋಪಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್ ಹಾಗೂ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಯಿತು.
ಮೈಸೂರು ವಿಶ್ವವಿದ್ಯಾನಿಲಯವು ಹಾಸನ, ಚಾಮರಾಜನಗರ, ಮೈಸೂರು ಜಿಲ್ಲೆಗಳನ್ನು ಒಳಗೊಂಡಂತೆ 22 ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆಹಿಡಿದಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ತೊಂದರೆಯಾಗುತ್ತಿದೆ ಎಂದರು. ಪ್ರತಿಭಟನೆಯಲ್ಲಿ ಎಐಎಂಎಸ್ ಎಸ್ ಜಿಲ್ಲಾ ಕಾರ್ಯದರ್ಶಿ ಸಂಧ್ಯಾ ಪಿ.ಎಸ್, ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.