ಮೈಸೂರು: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ಅವರನ್ನು ನೇಮಕ ಮಾಡಲಾಗಿದೆ.
ಸಹಕಾರ ಮತ್ತು ಸಕ್ಕರೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಹೆಚ್.ಎಸ್.ಮಹದೇವಪ್ರಸಾದ್ ಅವರ ಹಠಾತ್ ನಿಧನದಿಂದ ತೆರವಾಗಿದ್ದ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಹೊಣೆಯನ್ನು ಇದೀಗ ಖಾದರ್ ಅವರ ಹೆಗಲಿಗೆ ನೀಡಲಾಗಿದೆ.
ಅಲ್ಪಸಂಖ್ಯಾತರೊಬ್ಬರು ಈ ಜಿಲ್ಲೆಯ ಉಸ್ತುವಾರಿವಹಿಸಿಕೊಂಡಿರುವುದು ಇದೇ ಮೊದಲಾಗಿದ್ದು, ಈ ಮೊದಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಪ್ರೊ.ಮುಮ್ತಾಜ್ ಅಲಿಖಾನ್ ಅವರನ್ನು ಧ್ವಜಾರೋಹಣ ನೆರವೇರಿಸಲು ಒಂದು ದಿನದ ಮಟ್ಟಿಗೆ ಚಾಮರಾಜನಗರಕ್ಕೆ ನಿಯೋಜಿಸಲಾಗಿತ್ತು.