ಮೈಸೂರು: ನಾನು ಶಾಸಕ ಜೊತೆಗೆ ಸಚಿವ ಆದರಿಂದ ನಂಜನಗೂಡು ಉಪಚುನಾವಣೆಗೆ ಸ್ಪರ್ಧೆ ಮಾಡುವ ಸಾಧ್ಯತೆ ಖಂಡಿತ ಇಲ್ಲ ಎಂದು ಲೋಕೋಪಯೋಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಮೈಸೂರಿನಲ್ಲಿ ಸ್ಪಷ್ಟ ಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ಮಹದೇವಪ್ಪ ಅವರಿಗೆ ನಂಜನಗೂಡು ಉಪಚುನಾವಣೆಯಲ್ಲಿ ಸ್ಪರ್ಧೇಮಾಡುವಂತೆ ಒತ್ತಡ ಹೇರಿದೆ ಕಾರಣ ನಂಜನಗೂಡು ಉಪಚುನಾವಣೆಯಲ್ಲಿ ಜೆಡಿಎಸ್ ನ ಕಳೆಲೇ ಕೇಶವಮೂರ್ತಿ ಅವರನ್ನ ಅಭ್ಯರ್ಥಿಯಾಗಿ ಮಾಡಲು ಸಿಎಂ ಹಾಗೂ ಸಂಸದ ಧ್ರುವನಾರಾಯಣ್ ಆಸಕ್ತಿ ಹೊಂದಿದ್ದು, ಇದಕ್ಕೆ ವಿರೂಧ ವ್ಯಕ್ತ ಪಡಿಸುತ್ತಿರುವ ಸಚಿವ ಮಹದೇವಪ್ಪ ತಮ್ಮ ಮಗನಿಗೆ ಉಪಚುನಾವಣೆಯಲ್ಲಿ ಟಿಕೆಟ್ ಕೊಡಿಸುವಂತೆ ಪ್ರಯತ್ನಿಸುತ್ತಿದ್ದು ಇದರಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಹೊಸ ರಾಜಕೀಯ ತಂತ್ರ ಹೂಡಿದ್ದು ಮಹದೇವಪ್ಪನವರನ್ನೇ ಉಪಚುನಾವಣೆಯಲ್ಲಿ ಕಣಕ್ಕಿಳಿವಂತೆ ಹೈಕಮಾಂಡ್ ಗೆ ಒತ್ತಡ ಹಾಕಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಡಾ.ಹೆಚ್.ಸಿ ಮಹದೇವಪ್ಪ ನಾನು ಹಾಲಿ ಶಾಸಕ ಜೊತೆಗೆ ಸಚಿವ, ಚುನಾವಣೆಯಲ್ಲಿ ಸ್ಪರ್ಧೇ ಮಾಡಲು ಸಾಧ್ಯವಿಲ್ಲ ಎಂದು ಖಂಡಿತವಾಗಿ ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ತಂತ್ರಕ್ಕೆ ಮಣಿದಿದ್ದಾರೆ.
ಇನ್ನೂ ಕಾಂಗ್ರೆಸ್ ಮುಖಂಡರ ಮನೆಗೆ ಐಟಿ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕಾನೂನು ತನ್ನ ಕೆಲಸವನ್ನ ಮಾಡುತ್ತದೆ ಇದರಲ್ಲಿ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದಷ್ಟೆ ಹೇಳಿದರು. ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರುವ ಬಗ್ಗೆ ಎದಿರುವ ಊಹಾಪೋಹಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ, ರಾಜಕೀಯ ಕಾಲಘಟದಲ್ಲಿ ಏನೇನು ನಡೆಯುತ್ತದೆ ಎಂಬ ಏನ್ನನು ಹೇಳಲು ಸಾಧ್ಯವಿಲ್ಲ ಎಂದು ಮಾರ್ಮಿಕವಾಗಿ ಮಾತನಾಡಿದರು.