News Kannada
Tuesday, February 07 2023

ಮೈಸೂರು

ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ

Photo Credit :

ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ

ಮೈಸೂರು: ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದಟರಾಮಯ್ಯನವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸಭೆಯಲ್ಲಿ ಪ್ರಮುಖವಾಗಿ ನಂಜನಗೂಡು ತಾಲೂಕಿನ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಚರ್ಚೆ ನಡೆಯಿತು. ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲು ವಿಳಂಬ ಯಾಕೆ. ಸರಿಯಾಗಿ ನೀರು ಪೂರೈಸದಿದ್ದರೆ ನಿಮ್ಮ ವಿರುದ್ದ ಏನು ಕ್ರಮ ಕೈಗೊಳ್ಳಲಿ, ಅಮಾನತು ಮಾಡೋಣವೇ ಎಂದು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಕಾರು ಗ್ಲಾಸ್ ಏರಿಸಿಕೊಂಡು ಓಡಾಡುತ್ತಿದ್ದೀರಿ, ಜನರ ಸಮಸ್ಯೆ ನಿಮಗೆ ಕಾಣುತ್ತಿಲ್ಲ. ಈ ತಿಂಗಳ ಕೊನೆಯೊಳಗೆ ಸಮರ್ಪಕ ನೀರು ಪೂರೈಸದಿದ್ದರೆ ಎಲ್ಲಾ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಇಂಜಿನಿಯರ್ ಓರ್ವರ ಅಸಮರ್ಪಕ ಹೇಳಿಕೆಗೆ ಕೋಪಗೊಂಡ ಮುಖ್ಯಮಂತ್ರಿಗಳು ನಿಮಗೆ ಮಾನ ಮರ್ಟಯಾದೆ ಇಲ್ಲವಾ, ಸ್ವಾಭಿಮಾನ ಇಲ್ಲವಾ, ಇಂಜಿನಿಯರಿಂಗ್ ಓದಬೇಕಾದರೆ ಏನು ಕಲಿಸಿಕೊಟ್ಟಿಲ್ಲವಾ ಎಂದು ಕೇಳಿದರು.  ಯಾರೂ ಯಾವುದನ್ನೂ ಕಲಿಸಿಕೊಡುವುದಿಲ್ಲ. ಮಾಡುತ್ತಾ ಕಲಿತುಕೊಳ್ಳಬೇಕು ಎಂದು ಬುದ್ಧಿ ಹೇಳುತ್ತಲೇ ಗದರಿದರು. ರೈತರಿಗೆ ಮಾರಾಟ ಮಾಡುವ ಮೇವು ದರವನ್ನು ಕೆ.ಜಿ.ಗೆ ಮೂರು ರೂ.ಗಳಿಂದ ಒಂದೂವರೆ ರೂಪಾಯಿಗೆ ಇಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಪ್ರಸ್ತುತ ಮೇವನ್ನು ಕೆ.ಜಿ.ಗೆ ಆರು ರೂಪಾಯಿ ಪ್ರಕಾರ ಖರೀದಿ ಮಾಡಿ ಮೂರು ರೂ.ಗಳಿಗೆ ರೈತರಿಗೆ ಮಾರಾಟ ಮಾಡಲಾಗುತ್ತಿದೆ. ಬರದಿಂದ ಸಂಕಷ್ಟಕ್ಕೆ ಗುರಿಯಾಗಿರುವ ರೈತರಿಗೆ ನೆರವಾಗಲು ದರ ಕಡಿತ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮೇವಿಗೆ ಕೊರತೆ ಇದೆ. ಆದ್ದರಿಂದ ಮೇವು ಹೊರ ರಾಜ್ಯಗಳಿಗೆ ಸಾಗಣೆ ಆಗದಂತೆ ನೋಡಿಕೊಳ್ಳಬೇಕು. ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್ ಅಧಿಕಾರಿಗಳು ಕಟ್ಟೆಚ್ವರ ವಹಿಸಬೇಕು ಎಂದು ಸೂಚಿಸಿದರು. ಮೇವು ಲಭ್ಯತೆ ಕುರಿತು ಗ್ರಾಮ ಪಂಚಾಯಿತಿಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ ಗಳು ಕೊರತೆ ಇರುವ ಕಡೆ ಮೇವು ಬೆಳೆಸಲು ರೈತರಿಗೆ ಉತ್ತೇಜನ ನೀಡಬೇಕು. ಇದಕ್ಕಾಗಿ ಅವರಿಗೆ ಕಿಟ್ ಗಳನ್ನು ವಿತರಿಸಬೇಕು ಎಂದು ಆದೇಶಿಸಿದರು.

ಮೈಸೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಇನ್ನೂ ತೀವ್ರ ಆಗಬಹುದು. ಹೀಗಾಗಿ ಬರ ಪರಿಸ್ಥಿತಿ ಎದುರಿಸಲು ಮೇ ತಿಂಗಳ ವರೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಿ. ಅಗತ್ಯ ಇರುವ ಕಡೆ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದುಕೊಂಡು ನೀರು ಪೂರೈಸಿ. ಕುಡಿಯುವ ನೀರಿಗೆ ತೊಂದರೆ ಎದುರಾಗದಂತೆ ನೋಡಿಕೊಳ್ಳಬೇಕು. ಇದಕ್ಕೆ ಸರ್ಕಾರ ಅಗತ್ಯ ಅನುದಾನ ಒದಗಿಸಲಿದೆ. ಯಾವುದೇ ಹಳ್ಳಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ದೂರು ಬರದಂತೆ ನೋಡಿಕೊಳ್ಳುವುದು. ಡಿಸಿ ಮತ್ತು ಸಿಇಒಗಳ ಜವಾಬ್ದಾರಿ  ಕುಡಿಯುವ ನೀರಿಗೆ ಯಾವುದೇ ಕಾನೂನು ಅಡ್ಡ ಬರಬಾರದು. ಸಮಸ್ಯೆ ಇದ್ದರೆ ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

See also  ಇಷ್ಟಬಂದೆಡೆ ಸ್ಪರ್ಧಿಸೋಕೆ ನಾನು ಕುಮಾರಸ್ವಾಮಿ ಅಲ್ಲ: ಸಿ.ಪಿ.ಯೋಗೇಶ್ವರ್

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸಂಸದ ಆರ್.ಧ್ರುವನಾರಾಯಣ, ಶಾಸಕರಾದ ವಾಸು, ಜಿ.ಟಿ.ದೇವೇಗೌಡ ಮತ್ತಿತರರು ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು