ಮೈಸೂರು: ಮೂವರು ಯುವಕರು ಒಂದೇ ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೃತರನ್ನು ಜಯಪುರ ಹೋಬಳಿಯ ಅರಸನಕೆರೆ ಗ್ರಾಮದ ಮಹೇಶ್ ಹಾಗೂ ವಿಜಯಕುಮಾರ್ ಎಂದು ಗುರುತಿಸಲಾಗಿದೆ. ಸುತ್ತೂರು ಜಾತ್ರೆಗೆ ಮಹೇಶ್, ವಿಜಯಕುಮಾರ್ ಹಾಗೂ ಗುರು ಒಂದೇ ಬೈಕ್ (ಕೆಎ.09 ಹೆಚ್.ಜೆ.7276)ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಕಲ್ಕುಂದ ಬಳಿ ಬೈಕ್ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಈ ಸಂದರ್ಭ ಮೂವರೂ ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಮಹೇಶ್ ಮತ್ತು ವಿಜಯಕುಮಾರ್ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗುರುವಿನ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.