ಮೈಸೂರು: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಂತಹ ಗಂಡಾನೆಯೊಂದು ಜಮೀನಿನಲ್ಲಿ ಹಾಕಿದ ವಿದ್ಯುತ್ ಬೇಲಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಸರಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೆಚ್.ಡಿ.ಕೋಟೆ ತಾಲೂಕಿನ ಹಾದನೂರು ಒಡೆಯನಪುರದ ರಮೇಶ್ ಎಂಬವರ ಜಮೀನಿನಗೆ ಆಹಾರವನ್ನು ಅರಸಿ ಬಂದ ಗಂಡಾನೆ ವಿದ್ಯುತ್ ಸ್ಪರ್ಶದಿಂದಾಗಿ ಸಾವನ್ನಪ್ಪಿರಬೇಕೆಂದು ಎನ್ನಲಾಗಿದ್ದು, ಸ್ಥಳಕ್ಕೆ ಹೆಡಿಯಾಲ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಂಜನಗೂಡು ಎಚ್.ಡಿ.ಕೋಟೆ ಗಡಿ ಭಾಗದಲ್ಲಿ ರಮೇಶ್ ಎಂಬುವವರ ಜಮೀನಿನಲ್ಲಿ ಕಾಡು ಪ್ರಾಣಿಗಳ ರಕ್ಷಣೆಗೆ ಹಾಕಿದ್ದ ವಿದ್ಯುತ್ ಬೇಲಿಗೆ ಸಿಲುಕಿ ಗಾಂಡಾನೆ ಸಾವ್ನಪ್ಪಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ ಹಾಗೂ ಸರಗೂರು ಪೊಲೀಸರು ಬೇಟಿ ನೀಡಿ, ಪರೀಶಿಲನೆ ನಡೆಸಿದ್ದಾರೆ.