ಮೈಸೂರು: ಮೈಸೂರಿನ ಪ್ರತಿಷ್ಠಿತ ಲಲಿತ್ ಮಹಲ್ ನ್ನು ಖಾಸಗೀಕರಣಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಲಲಿತ್ ಮಹಲ್ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.
ವಿಭಿನ್ನ ಪ್ರತಿಭಟನೆಯ ಮೂಲಕ ಗಮನ ಸೆಳೆಯುವ ವಾಟಾಳ್ ನಾಗರಾಜ್ ಶನಿವಾರ ಲಲಿತ್ ಮಹಲ್ ಎದುರು ಚಾಪೆಯನ್ನು ಹಾಸಿ ಅದರ ಮೇಲೆ ಮಲಗುವ ಮೂಲಕ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು ಲಲಿತ ಮಹಲ್ ಪಾರಂಪರಿಕ, ಐತಿಹಾಸಿಕ ಕಟ್ಟಡವಾಗಿದ್ದು, ಇದನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ನೀಡಬಾರದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು