ಮೈಸೂರು: ಆಟವಾಡುತ್ತಿದ್ದ ಮೂರು ವರ್ಷದ ಮಗುವಿನ ಮೇಲೆ ಕುಡಿದ ಅಮಲಿನಲ್ಲಿ ಮಾವನೇ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹೆಚ್.ಡಿ ಕೋಟೆ ತಾಲ್ಲೂಕಿನ ಕುಂಟೇರಿಹಾಡಿಯಲ್ಲಿ ನಡೆದಿದೆ.
ಹೆಚ್.ಡಿ.ಕೋಟೆ ತಾಲೂಕಿನ ಕುಂಟೇರಿಹಾಡಿಯ ಆದಿವಾಸಿ ಕುಟುಂಬಕ್ಕೆ ಸೇರಿದ ಮೂರು ವರ್ಷದ ಮಗುವಿನ ಮೇಲೆ ಮಾವ ದೊಡ್ಡ ಹೈದ (28) ಎಂಬಾತ ಅತ್ಯಾಚಾರಕ್ಕೆ ಯತ್ನಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ನಿನ್ನೆ ಮಧ್ಯಾಹ್ನ ಮನೆಯ ಹತ್ತಿರ ಆಟವಾಡುತ್ತಿದ್ದ ಮೂರು ವರ್ಷ ಮಗುವನ್ನ ಪಕ್ಕದ ಹುಣಸೇಮರದ ತೋಪಿಗೆ ಕುಡಿದ ಅಮಲಿನಲ್ಲಿ ಎತ್ತಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಪೋಷಕರು ಅತ್ಯಾಚಾರವೆಸಗಿದ್ದಾನೆ ಎಂದು ಮಾವ ದೊಡ್ಡ ಹೈದನ ವಿರುದ್ದ ಹೆಚ್.ಡಿಕೋಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದೂರು ನೀಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದು ಮಗುವನ್ನ ಇಂದು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.