ಮೈಸೂರು: ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಕೆ.ಆರ್. ಮೊಹಲ್ಲಾದ ಹುಲ್ಲಿನ ಬೀದಿಯಲ್ಲಿ ಎಸ್.ಕೆ.ಎಂ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ ಕಾಮುಕ ಶಿಕ್ಷಕನೋರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಕೃಷ್ಣಮೂರ್ತಿ ಎಂದು ಗುರುತಿಸಲಾಗಿದೆ. ಈತ ಟ್ಯೂಷನ್ ಗೆ ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿಯರ ಪೋಷಕರು ಆರೋಪಿಸಿದ್ದಾರೆ. ಪೋಷಕರ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ. ಈತ ವಿದ್ಯಾರ್ಥಿನಿರೊಂದಿಗೆ ಅಶ್ಲೀಲ ಭಂಗಿಯಲ್ಲಿ ಫೋಟೋ, ವೀಡಿಯೋ ತೆಗೆದುಕೊಂಡಿದ್ದ ಎನ್ನಲಾಗಿದೆ. ಆತನ ಮೊಬೈಲ್ ನೋಡಿ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ.