News Kannada
Monday, January 30 2023

ಮೈಸೂರು

ಶಾಲೆಗಳಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಗೀತದ ಬಗ್ಗೆ ಹೆಚ್ಚಿನ ಅರಿವು ಅಗತ್ಯ: ಹೆಚ್.ಎ.ವೆಂಕಟೇಶ್

Photo Credit :

ಶಾಲೆಗಳಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಗೀತದ ಬಗ್ಗೆ ಹೆಚ್ಚಿನ ಅರಿವು ಅಗತ್ಯ: ಹೆಚ್.ಎ.ವೆಂಕಟೇಶ್

ಮೈಸೂರು: ರಾಜೇಂದ್ರ ನಗರದಲ್ಲಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಶಾಲೆಗಳಲ್ಲಿ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಶಾಲೆಗಳಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಗೀತದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಇಂದು ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮವು ಒಂದು ಉತ್ತಮ ಮಜಲಾಗಿದ್ದು, ಈ ದಿಸೆಯಲ್ಲಿ ಸರ್ಕಾರವು ಮುಂದಿನ ಶೈಕ್ಷಣಿಕ ವರ್ಷದಿಂದ ಪಠ್ಯ ಪುಸ್ತಕಗಳಲ್ಲಿ ಸಂಗೀತ ವಿಷಯವನ್ನು ಕುರಿತು ಒಂದು ಅಧ್ಯಾಯವನ್ನು ಆರಂಭಿಸಲು ಚಿಂತನೆ ನಡೆಸಿದೆ ಎಂದರು.

ಫೆಬ್ರವರಿ 6ರಿಂದ ಆರಂಭಗೊಳ್ಳುವ ಈ ಕಾರ್ಯಕ್ರಮವು ಈ ತಿಂಗಳ 14ರ ವರೆಗೆ ಮುಂದುವರೆಯಲಿದ್ದು ಜಿಲ್ಲೆಯಾದ್ಯಂತ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರಲ್ಲದೇ, ಈ ಕಾರ್ಯಕ್ರಮಕ್ಕಾಗಿ ನಿಯೋಜಿಸಲಾಗಿರುವ ಕಪಿಲಯಾನ ಹಾಗೂ ಕಾವೇರಿಯಾನ ವಾಹನಗಳಿಗೆ ಹಸಿರು ನಿಶಾನೆ ತೋರಿದರು. ಈ ಎರಡೂ ವಾಹನಗಳು ಮೈಸೂರು ಗ್ರಾಮಾಂತರದಲ್ಲಿನ ಶಾಲೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಟಿ.ನರಸೀಪುರ ತಾಲೂಕಿನಲ್ಲಿ ಫೆ.8 ಮತ್ತು 9ರಂದು ನಂಜನಗೂಡು ತಾಲೂಕಿನಲ್ಲಿ ಫೆ.10 ಮತ್ತು 11ರಂದು, ಫೆ.12 ಹಾಗೂ 13ರಂದು ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಸಂಚರಿಸಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಿದೆ ಎಂದರು.

ಫೆ.14 ರಂದು ಬೆಳಗ್ಗೆ ಚಾಮುಂಡಿಪುರಂನಲ್ಲಿರುವ ಸೈಂಟ್ ಮೇರಿಸ್ ಶಾಲೆ, ಕುವೆಂಪು ನಗರದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯಕ್ರಮ ಮುಗಿದ ನಂತರ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ವೆಂಕಟೇಶ್, ಉಪಮಹಾಪೌರ ರತ್ನಲಕ್ಷ್ಮಣ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಆರ್.ಬಸಪ್ಪ, ತಾಯೂರು ವಿಠಲಮೂರ್ತಿ, ಪ.ಮಲ್ಲೇಶ್, ವೇಣುಗೋಪಾಲ್  ಮತ್ತಿತರರು ಉಪಸ್ಥಿತರಿದ್ದರು. ಮಕ್ಕಳಿಗೆ ಪಠ್ಯ ಕೃತಿಗಳನ್ನು ಗಾಯನದ ಮೂಲಕ ಹಾಡಿ ತೋರಿಸಲಾಯಿತು.

 

See also  ಗರ್ಭಕೋಶ ತೆಗೆದ ಪ್ರಕರಣ: ವೈದ್ಯರ ವಿರುದ್ದ ಕೇಸ್ ದಾಖಲಿಸಲು ಆದೇಶ ನೀಡಿದ ಖಾದರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು