ಮೈಸೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ನನ್ನ ತಂದೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲದೆ ಮೃತಪಟ್ಟಿದ್ದಾರೆ ಎಂದು ಮಗ ಆರೋಪಿಸಿರುವ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿ ಚಿಕ್ಕಮಾದಯ್ಯ(68). ಇವರು ಕಳೆದ ತಿಂಗಳು 25ರಂದು ಬಂಬೂ ಬಜಾರ್ ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಮೊದಲು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಅಲ್ಲಿ ಸರಿಯಾದ ಚಿಕಿತ್ಸೆ ದೊರೆಯದ ಹಿನ್ನಲ್ಲೆಯಲ್ಲಿ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮರಣಗೊಂದಿದ್ದು ಇದಕ್ಕೆ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದೆ ಜೊತೆಗೆ ವೆಂಟಿಲೇಟರ್ ಇಲ್ಲದ ಕಾರಣಕ್ಕೆ ಸಾವ್ನಪ್ಪಿದ್ದಾರೆ ಎಂದು ಅವರ ಮಗ ಆರೋಪಿಸಿದ್ದು, ಈ ಸಂಬಂಧ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಈ ಸಂಬಂಧ ಕೆ.ಆರ್ ಆಸ್ಪತ್ರೆಯ ಮುಖ್ಯಸ್ಥ ಡಾ.ಕೃಷ್ಣ ಮೂರ್ತಿಯನ್ನ ಸಂಪರ್ಕಿಸಲು ಪ್ರಯತ್ನಿಸಿದಾಗ ಯಾವುದೇ ಮಾಹಿತಿ ನೀಡಲು ನಿರಾಕರಿಸಿದರು. ಈ ಸಂಬಂಧ ಎನ್.ಆರ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.