ಮೈಸೂರು: ಸಿಎಂ ಸ್ವಕ್ಷೇತ್ರ ವರುಣಾದ ದಂಡಿಕೆರೆ ಗ್ರಾಮದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು ಗ್ರಾಮದ ಆರು ಜನಕ್ಕೆ ಕಚ್ಚಿ ತೀವ್ರ ಗಾಯಗೊಳಿಸಿದ್ದು ಅವರನ್ನ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಯ್ಯ, ಮಹದೇವು, ರಾಜು ಸೇರಿದಂತೆ ಆರು ಜನರ ಮೇಲೆ ದಾಳಿ ನಡೆಸಿದ್ದು, ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳನ್ನು ಕೆ ಆರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಬೀದಿನಾಯಿಗಳ ಕಾಟ ಹೆಚ್ಚುತ್ತಿದೆ ಏನಾದರೂ ಕ್ರಮ ಕೈಗೊಳ್ಳಿ ಎಂದು ಈ ಮೊದಲೇ ಗ್ರಾಮಪಂಚಾಯತ್ ಅಧ್ಯಕ್ಷರಿಗೆ ದೂರು ನೀಡಲಾಗಿದ್ದರೂ, ಅವರು ಯಾವುದೇ ಕ್ರಮ ಕೈಗೊಳ್ಳದೇ ಸುಮ್ಮನಿದ್ದರು ಎನ್ನಲಾಗಿದ್ದು, ಅಧ್ಯಕ್ಷರ ಈ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯತಿಯ ಅಧ್ಯಕ್ಷರು ನಾಯಿಗಳನ್ನ ಹಿಡಿಯಲು ಸರಿಯಾದ ಸಲಕರಣೆಗಳು ಗ್ರಾಮ ಪಂಚಾಯತಿಯಲಿಲ್ಲ, ಜೊತೆಗೆ ನಾಯಿಗಳನ್ನ ಸಾಯಿಸುವಂತಿಲ್ಲ ಎಂದು ತಮ್ಮ ಅಸಹಾಯಕತೆಯನ್ನ ವ್ಯಕ್ತಪಡಿಸಿದರು.