ಮೈಸೂರು: ಮೈಸೂರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಅರಸು ಜಯಂತ್ಯೋತ್ಸವ ಸಮಿತಿ ವತಿಯಿಂದ ರಾಜರ್ಷಿ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಕಲಾಮಂದಿರದಲ್ಲಿ ಆಚರಿಸಲಾಗಿದ್ದು, ಅದಕ್ಕೂ ಮುನ್ನ ಅರಮನೆ ಅವರಣದ ಪ್ರಸನ್ನ ಲಕ್ಷ್ಮಿರಮಣ ಸ್ವಾಮಿ ದೇವಸ್ಥಾನದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ಹೊತ್ತ ಅದ್ದೂರಿ ಮೆರವಣಿಗೆ ಕಲಾಮಂದಿರಕ್ಕೆ ಸಾಗಿ ಬಂತು.
ಅದಕ್ಕೂ ಮುನ್ನ ಕೆ.ಆರ್.ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಪುಷ್ಪಾರ್ಚನೆಗೈಯ್ಯಲಾಯಿತು. ಮೆರವಣಿಗೆಯಲ್ಲಿ ಗಾಂಭೀರ್ಯದೊಂದಿಗೆ ಗಜಗಳು ಹೆಜ್ಜೆ ಹಾಕಿದವು. ವಿವಿಧ ಪ್ರಕಾರದ ಜಾನಪದ ಕಲಾತಂಡಗಳು ಪಾಲ್ಗೊಂಡು ಗಮನ ಸೆಳೆದವು.
ಈ ಸಂದರ್ಭ ಮಳವಳ್ಳಿ ಮಠದ ವರ್ಚಸ್ವಿ ಸಿದ್ದಲಿಂಗರಾಜೇ ಅರಸ್ ಸ್ವಾಮೀಜಿ, ಶಾಸಕ ಎಂ.ಕೆ.ಸೋಮಶೇಖರ್, ಧ್ರುವಕುಮಾರ್, ಎಂ.ಜೆ.ರವಿಕುಮಾರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.