ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಕಸಾಯಿಖಾನೆಗೆ ಸಾಗಾಣೆ ಮಾಡುತ್ತಿದ್ದ 5 ಕರುಗಳನ್ನು ರಕ್ಷಿಸಿದ್ದು, ಈ ಸಂಬಂಧ ಒಬ್ಬನನ್ನು ಬಂಧಿಸಿದ್ದಾರೆ.
ಗುರುವಾರ ತೆರಕಣಾಂಬಿ ಸಂತೆಯಿಂದ ಕಡಿಮೆ ಬೆಲೆಗೆ ಖರೀದಿಸಿದ 5 ಕರುಗಳನ್ನು ಮುರಾರ್ಜಿ ದೇಸಾಯಿ ಶಾಲೆಯ ಬಳಿಯಲ್ಲಿ ನಡೆಸಿಕೊಂಡು ಹೋಗುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಜಾನುವಾರುಗಳನ್ನು ರಕ್ಷಿಸಿದರು.
ಈ ಸಂಬಂಧ ಸಲೀಂ ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.