ಮೈಸೂರು: ಡೈರಿಯ ಕಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಮೈಸೂರಿನ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನ ಅನುಮತಿ ಪಡೆಯದ ಹಿನ್ನಲ್ಲೆಯಲ್ಲಿ ಪೊಲೀಸರು ಬಂಧಿಸಿ ಕರೆದೊಯ್ದರು.
ಕಾಂಗ್ರೆಸ್ ಹೈಕಮಾಂಡ್ ಗೆ ರಾಜ್ಯದಿಂದ ಸಚಿವರು ಹಾಗೂ ಉದ್ಯಮಿಗಳು ನೀಡಿರುವ ಕಪ್ಪದ ಬಗ್ಗೆ ಡೈರಿಯಲ್ಲಿ ಉಲ್ಲೇಖವಾಗಿರುವ ಹಿನ್ನಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಗರ ಬಿಜೆಪಿ ಘಟಕ ಮೈಸೂರಿನ ಟಿ.ಕೆ ಲೇಔಟ್ ನಲ್ಲಿರುವ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು ಯತ್ನಿಸಿದ ಸುಮಾರು 200 ಕಾರ್ಯಕರ್ತರನ್ನ ಪೊಲೀಸರು ಪ್ರತಿಭಟನೆಗೆ ಯಾವುದೇ ಅನುಮತಿ ಪಡೆಯದ ಹಿನ್ನಲ್ಲೆಯಲ್ಲಿ ಬಂಧಿಸಿ ಸಿಎಆರ್ ಪೊಲೀಸ್ ಮೈದಾನಕ್ಕೆ ಕರೆದೊಯ್ದರು.