ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕೆಇಬಿ ಕಚೇರಿ ಆವರಣದೊಳಗೆ ನುಗ್ಗಿದ ಘಟನೆ ಶನಿವಾರ ನಸುಕಿನಲ್ಲಿ ನಡೆದಿದೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಬೆಂಗಳೂರಿನಿಂದ ಮೈಸೂರು ಕಡೆ ಬರುತ್ತತ್ತು. ಮೈಸೂರಿನ ಎಫ್.ಟಿ.ಎಸ್ ವೃತ್ತದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಕೆಇಬಿ ಕಂಪೌಂಡ್ ಗೋಡೆಗೆ ಗುದ್ದಿದ್ದು, ಕಚೇರಿ ಆವರಣವನ್ನು ಪ್ರವೇಶಿಸಿದೆ. ಬಸ್ ಅಲ್ಪ ಪ್ರಮಾಣದಲ್ಲಿ ಜಖಂಗೊಂಡಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಎನ್.ಆರ್.ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.