ಮೈಸೂರು: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯಸಿಂಗ್ ಜೆಡಿಎಸ್ ವರಿಷ್ಟ ಹೆಚ್.ಡಿ ದೇವೇಗೌಡ ಅವರನ್ನ ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮುಖಾ-ಮುಖಿ ಭೇಟಿಯಾಗಿದ್ದು, ಈಗ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ಮೂರು ದಿನಗಳಿಂದ ಹೆಚ್.ಡಿ ಕೋಟೆಯ ಖಾಸಗಿ ರೆಸಾರ್ಟ್ ನಲ್ಲಿ ಕುಟುಂಬ ಸಮೇತ ವಾಸ್ತವ್ಯ ಹೂಡಿದ ದಿಗ್ವಿಜಯ ಸಿಂಗ್ ಇಂದು ನಿಧನರಾದ ಸಚಿವ ಹೆಚ್.ಎಸ್ ಮಹದೇವಪ್ರಸಾದ್ ಅವರ ಪತ್ನಿ ಗೀತಾ ಮಹದೇವಪ್ರಸಾದ್ ಅವರನ್ನ ಭೇಟಿ ಮಾಡಿ ಸಾಂತ್ವನ ಹೇಳಿ ನಂತರ ಸರ್ಕಾರಿ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಟಿ ನಡೆಸುತ್ತಿದ್ದ ಹೆಚ್.ಡಿ ದೇವೇಗೌಡರನ್ನ ಭೇಟಿ ಮಾಡಿ ಇಬ್ಬರು ಕುಶಲೋಪರಿ ವಿಚಾರಿಸಿದರು.
ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ಹಿನ್ನಲ್ಲೆಯಲ್ಲಿ ಕಾಂಗ್ರೆಸ್ ಈಗಾಗಲೇ ಗೆಲಲ್ಲು ರಣತಂತ್ರ ರೂಪಿಸಿದ್ದು ಜೊತೆಗೆ ಕಾಂಗ್ರೆಸ್ ಗೆ ಪ್ರತಿಷ್ಟೆಯ ವಿಚಾರವಾಗಿರುವ ಉಪಚುನಾವಣೆಯಲ್ಲಿ ಗೆಲ್ಲಲು ಜೆಡಿಎಸ್ ನ ಸಹಕಾರ ಕೋರಿದ್ದು ಈ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಯನ್ನ ಕಣಕ್ಕಿಳಿಸದಂತೆ ಮನವಿ ಮಾಡಿದ್ದು ಕಾಂಗ್ರೆಸ್ ಗೆ ಸಹಾಯ ಮಾಡುವಂತೆ ಈಗಾಗಲೇ ಜೆಡಿಎಸ್ ವರಿಷ್ಟ ಹೆಚ್.ಡಿ ದೇವೇಗೌಡ ಅವರನ್ನ ಕಾಂಗ್ರೆಸ್ ಒಂದು ಗುಂಪು ಭೇಟಿಯಾಗಿ ಮನವಿ ಮಾಡಿದ್ದು ಈ ಹಿನ್ನಲ್ಲೆಯಲ್ಲಿ ಈ ದಿನ ದಿಗ್ವೀಜಯ ಸಿಂಗ್ ಬೇಟಿ ಹಲವಾರು ರಾಜಕೀಯ ಕೂತುಹಲಕ್ಕೆ ಕಾರಣವಾಗಿದೆ.