News Kannada
Monday, February 06 2023

ಮೈಸೂರು

ನಂಜನಗೂಡು ಉಪಚುನಾವಣೆ: ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ

Photo Credit :

ನಂಜನಗೂಡು ಉಪಚುನಾವಣೆ: ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ

ಮೈಸೂರು: ನಂಜನಗೂಡು ಉಪಚುನಾವಣೆಯನ್ನ ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮವನ್ನ ಕೈಗೊಳ್ಳಿ ಎಂದು ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಭೆ ನಡೆಸಿ ಸೂಚನೆ ನೀಡಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಡಿ.ರಂದೀಪ್ ಚುನಾವಣಾ ಸಂದರ್ಭ ಜನಸಾಮಾನ್ಯರಿಗೆ ಯಾವುದೇ ರೀತಿಯಿಂದಲೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಚೆಕ್ ಪೋಸ್ಟ್ ಗಳಲ್ಲಿ ಸರಿಯಾಗಿ ತಪಾಸಣೆ ನಡೆಸಿ, ಅಕ್ರಮ ಮದ್ಯ ಸಾಗಾಟವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು.  15 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ತಪಾಸಣೆ ನಡೆಸಬೇಕು. ಬಾರ್, ಹೋಟೆಲ್ ಮಾಲಕರಿಗೆ ಚುನಾವಣಾ ನೀತಿ ಸಂಹಿತೆಯ ಕುರಿತು ತಿಳಿಸಿ ಹಾಗೂ ಶಾಂತಿ ಕದಡುವಂತಹ ವ್ಯಕ್ತಿಗಳ ಮೇಲೆ ನಿಗಾ ಇರಿಸಿ ಕಠಿಣ ಕ್ರಮಕೈಗೊಳ್ಳಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೈಸೂರು ಜಿಲ್ಲೆಯಲ್ಲಿ ಮಾ.9ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಮತದಾರರಿಗೆ ಯಾವುದೇ ಆಮಿಷ ಒಡ್ಡಿದ್ದು ತಿಳಿದು ಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು. ಮತಗಟ್ಟೆಗಳ ಪರಿಶೀಲನೆ, ಭದ್ರತಾ ಕೊಠಡಿ, ಮತಎಣಿಕೆ ಕೇಂದ್ರ ಸ್ಥಾಪನೆ, ಕಂಟ್ರೋಲ್ ರೂಂ ಸ್ಥಾಪನೆ, ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ವಿವಿಧ ತಂಡಗಳ ರಚನೆ  ಕುರಿತಂತೆಯೂ ಚರ್ಚೆ ನಡೆಯಿತು.

See also  ಆಶಾ ಕಾರ್ಯಕರ್ತೆಯರ ಸಂಘದಿಂದ ಮೈಸೂರಿನಲ್ಲಿ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು