ಮೈಸೂರು: ಮಾರ್ಚ್ 15 ರಂದು ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ಬಿಎಸ್ ಯಡಿಯೂರಪ್ಪ ಮೈಸೂರಿನಲ್ಲಿ ಎಸ್.ಎಂ ಕೃಷ್ಣ ಬಿಜೆಪಿ ಸೇರುವುದನ್ನ ಖಚಿತ ಪಡಿಸಿದ್ದಾರೆ.
ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಎಸ್ ಎಂ ಕೃಷ್ಣ ಬಿಜೆಪಿ ಸೇರುವುದು ಖಚಿತವಾಗಿದ್ದು, ಬಿಜೆಪಿ ರಾಷ್ರೀಯ ಅಧ್ಯಕ್ಷ ಅಮೀತ್ ಶಾ ಅವರೊಂದಿಗೆ ಇಂದು ಸಂಜೆ ಎಸ್.ಎಂ ಕೃಷ್ಣ ದೆಹಲಿಯಲ್ಲಿ ಮಾತುಕತೆ ನಡೆಸಲಿದ್ದು, ನಂಜನಗೂಡು ಚುನಾವಣೆ ಪ್ರಚಾರ ಮುಗಿಸಿಕೊಂಡು ನಾಳೆ ದೆಹಲಿಗೆ ತೆರಳಿ ಎಸ್.ಎಂ ಕೃಷ್ಣ ಅವರನ್ನ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.
ಕಳಲೆ ಕೇಶವಮೂರ್ತಿ ಹಾಗೂ ಶ್ರೀನಿವಾಸ್ ಪ್ರಸಾದ್ ನಡುವೆ ಪೈಪೋಟಿ ಇದೆ ಎನ್ನುವ ಮೂಲಕ ಸಿದ್ದರಾಮಯ್ಯ ಸೋಲೊಪ್ಪಿಕೊಂಡಿದ್ದಾರೆ. ನಂಜನಗೂಡಿನಲ್ಲಿ ಜನರು ನೀರಿಕ್ಷೆಗೂ ಮೀರಿ ಬೆಂಬಲ ನೀಡುತ್ತಿದ್ದಾರೆ. ನಾನು ಬಂದಿದ್ದು ಪ್ರಚಾರಕ್ಕೋ ಅಥವಾ ವಿಜಯೋತ್ಸವಕ್ಕೋ ಎಂಬ ಅನುಮಾನ ನನ್ನನ್ನು ಕಾಡುತ್ತಿದ್ದು ನಂಜನಗೂಡು ಉಪಚುನಾವಣೆ ಬಿಜೆಪಿ ಗೆಲುವು ಖಚಿತ ಎಂದರು. ಗುಂಡ್ಲುಪೇಟೆಯಲ್ಲಿ ಸಿ.ಎಂ.ಇಬ್ರಾಹಿಂ ಹೇಳಿಕೆ ಕುರಿತು ಪ್ರಶ್ನಿಸಿದಾಗ ಅಂಥವರ ಹೇಳಿಕೆಗಳಿಗೆ ನಾನು ಉತ್ತರ ನೀಡಲ್ಲ ಎಂದು ಯಡಿಯೂರಪ್ಪ ಹೇಳಿದರು.