ಮೈಸೂರು: ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.57 ರ ಸದಸ್ಯ ನಟರಾಜ್ ಎಂಬವರು ಅಭಿವೃದ್ಧಿ ಅಧಿಕಾರಿ ನಿಂಗಾ ಶೆಟ್ಟಿ ಎಂಬವರಿಗೆ ಕಾಮಗಾರಿ ವಿಷಯಕ್ಕೆ ಸಂಬಂಧಿಸಿದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ವಿರೋಧಿಸಿ ಪಾಲಿಕೆಯ ಅಧಿಕಾರಿಗಳು ಪ್ರತಿಭಟನೆ ನಡೆಸಿದರು.
ನಗರದ ಪಾಲಿಕೆ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ವಿವಿಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮೇಯರ್ ಎಂ.ಜೆ.ರವಿಕುಮಾರ್ ಮಾತನಾಡಿ ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.57 ರ ಸದಸ್ಯ ನಟರಾಜ್ ಎಂಬವರು ಅಭಿವೃದ್ಧಿ ಅಧಿಕಾರಿ ನಿಂಗಾ ಶೆಟ್ಟಿ ಎಂಬವರಿಗೆ ಕಾಮಗಾರಿ ವಿಷಯಕ್ಕೆ ಸಂಬಂಧಿಸಿದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ನಮ್ಮ ಗಮನಕ್ಕೆ ಬಂದಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ
ಪಾಲಿಕೆ ಸದಸ್ಯ ನಟರಾಜ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೆವೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ 100 ಕ್ಕೂ ಅಧಿಕ ಅಧಿಕಾರಿಗಳು ಪಾಲ್ಗೊಂಡಿದ್ದರು.