ಮೈಸೂರು: ಓವರ್ ಟೇಕ್ ಮಾಡುವ ಬರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ರಾಜ್ಯ ರಸ್ತೆ ಸಾರಿಗೆ ಬಸ್ ತೋಟಕ್ಕೆ ನುಗ್ಗಿದ್ದ ಘಟನೆ ಹೆಚ್.ಡಿ ಕೋಟೆ ಬಳಿಯ ಕೋಡಿ ಅರಳಿ ಮರದ ಬಳಿ ನಡೆದಿದೆ.
ಇಂದು ಮದ್ಯಾಹ್ನ ಹೆಚ್.ಡಿ.ಕೋಟೆಯಿಂದ ಮೈಸೂರು ಕಡೆ ಬರುತ್ತಿದ್ದ ರಾಜ್ಯರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ವೇಗವಾಗಿ ಮುಂದೆ ಹೋಗುತ್ತಿದ್ದ ವಾಹನವನ್ನ ಓವರ್ ಟೇಕ್ ಮಾಡವ ಬರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ್ದು, ಆರು ಜನ ಪ್ರಯಾಣಿಕರಿಗೆ ಗಾಯವಾಗಿದ್ದು, ಎಲ್ಲರನ್ನ ಆಸ್ಪತ್ರೆಗೆ ಸೇರಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಈ ಸಂಬಂದ ಹೆಚ್.ಡಿ ಕೋಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರೀಶಿಲನೆ ನಡೆಸಿದ್ದಾರೆ.