News Kannada
Monday, October 03 2022

ಮೈಸೂರು

ಹಿಂದುಳಿದ ವರ್ಗಗಳ ಮೀಸಲಾತಿ ಹಿಂಬಡ್ತಿ ತೀರ್ಪನ್ನು ವಿರೋಧಿಸಿ ಪ್ರತಿಭಟನೆ - 1 min read

Photo Credit :

ಹಿಂದುಳಿದ ವರ್ಗಗಳ ಮೀಸಲಾತಿ ಹಿಂಬಡ್ತಿ ತೀರ್ಪನ್ನು ವಿರೋಧಿಸಿ ಪ್ರತಿಭಟನೆ

ಮೈಸೂರು: ಹಿಂದುಳಿದ ವರ್ಗಗಳ ಮೀಸಲಾತಿ ಹಿಂಬಡ್ತಿ ತೀರ್ಪನ್ನು ವಿರೋಧಿಸಿ ಮೀಸಲಾತಿ ಸಂರಕ್ಷಣಾ ಸಮಿತಿ ಮೈಸೂರು ವಿಭಾಗದಿಂದ ಪ್ರತಿಭಟನೆ ನಡೆಸಿದರು.

ನಗರದ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಎಲ್ಲಾ ವರ್ಗದ ಜನರು ಸಮಾವೇಶಗೊಂಡು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವಂತೆ ವಿವಿಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ  ನಮ್ಮ ದೇಶದ ಘನ ಸರ್ವೋಚ್ಛ ನ್ಯಾಯಾಲಯ ಫೆಬ್ರಬರಿ 9 ರಂದು ನೀಡಿರುವ ತೀರ್ಪಿನಲ್ಲಿ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗ ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ  ನೀಡಲಾಗಿದ್ದ ಬಡ್ತಿ ಮೀಸಲಾತಿಯನ್ನು ಅಸಿಂಧುವೆಂದು ಪರಿಗಣಿಸಿ ಅದನ್ನು ರದ್ದುಗೊಳಿಸಿದೆ. ಅಷ್ಠೇ ಅಲ್ಲದೆ ತನ್ನ ತೀರ್ಪಿನಲ್ಲಿ ಈ ಜನಾಂಗಗಳಿಗೆ ತೀವ್ರ ನೋವು,  ಆಘಾತ ಉಂಟಾಗಿದೆ.

ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸಾಮಾಜಿಕ ನ್ಯಾಯಕ್ಕಾಗಿ ಸಂವಿಧಾನ ಬದ್ಧ ಹಕ್ಕನ್ನು ಉಳಿಸಿಕೊಳ್ಳುವ ಸಲುವಾಗಿ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ  ಪ್ರತಿಭಟನಾ  ನಡೆಸುತ್ತಿದ್ದೇವೆ ಎಂದರು. ನಂತರ ಕರ್ನಾಟಕ ರಾಜ್ಯ ನಾಯಕರ  ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ ಮಾತನಾಡಿದರು. ನಂತರ  ಬಡ್ತಿ ಮೀಸಲಾತಿ ಸಂಬಂಧ ಮೇಲ್ಮನವಿ ಸಲ್ಲಿಸಿ ಮತ್ತು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜ್ಞಾನಪ್ರಕಾಶ್ ಸ್ವಾಮೀಜಿ, ಎಸ್.ಡಿ.ಜೋಸೆಫ್, ಮಹೇಶ್ ಸೋಸಲೆ, ರಾಜು ಚಿನ್ನಸ್ವಾಮಿ, ಟಿ.ಗೋಪಾಲ್ ಹಾಗೂ ಇನ್ನಿತರೇ ಎಲ್ಲಾ ವಿವಿಧ ವರ್ಗದವರು ಪಾಲ್ಗೊಂಡಿದ್ದರು.

See also  ಕನಕದಾಸನಿಗೂ ಉಡುಪಿಗು ಸಂಬಂದವೇ ಇಲ್ಲ:ಶೆಲ್ವ ಪಿಳ್ಳೆ ಅಯ್ಯಾಂಗಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು