ಮೈಸೂರು: ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪರವರು ರಾಜಕೀಯಕ್ಕೆ ಪ್ರವೇಶಿಸುತ್ತಿದ್ದು, ಜೆಡಿಎಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಮಾತುಗಳು ಎಲ್ಲೆಡೆ ಹರಿದಾಡುತ್ತಿದ್ದು, ಸ್ವತಃ ಅವರೇ ನಾನು ರಾಜಕೀಯಕ್ಕೆ ಪ್ರವೇಶಿಸುತ್ತಿದ್ದೇನೆ ಎಂದು ಸ್ಪಷ್ಟ ಪಡಿಸಿದ್ದಾರೆ.
ನಗರದ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಬಂದಿದ್ದ ಸಂದರ್ಭ ಈ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೂ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು ನಾನು ಈಗಾಗಲೇ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ನಾನು ಹಿಂದೆ ರಾಜಕೀಯಕ್ಕೆ ಪ್ರವೇಶಿಸಲ್ಲ ಅಂತ ಹೇಳಿದ್ದೇ ಆಗ ಆ ಮಾತು ಆ ಸಂದರ್ಭಕ್ಕೆ ಅನಿವಾರ್ಯವಾಗಿತ್ತು. ಆದರೆ ಈಗ ನಾನು ರಾಜಕೀಯಕ್ಕೆ ಪ್ರವೇಶಿಸುತ್ತಿದ್ದೇನೆ. ನನ್ನ ರಾಜಕೀಯ ಪ್ರವೇಶಕ್ಕೆ ಇನ್ನೂ ಸಮಯ ಗೊತ್ತಾಗಿಲ್ಲ, ಪಕ್ಷದವರ ಜೊತೆ ಮಾತು ಕತೆ ನಡೆಸಿ ನಂತರ ರಾಜಕೀಯ ಪ್ರವೇಶಿಸುತ್ತೇನೆ. ಈ ಶಿಕ್ಷಣ ಕ್ಷೇತ್ರದಲ್ಲಿ ಶ್ರಮಿಸಿದ ಹಾಗೆಯೇ ರಾಜಕೀಯ ಕ್ಷೇತ್ರದಲ್ಲಿಯೂ ಶ್ರಮಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು..