ಮೈಸೂರು: ಮನೆಯೊಂದರಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯನ್ನ ನಗರ ಸಿಸಿಬಿ ಹಾಗೂ ಅಶೋಕಪುರಂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಅಶೋಕಪುರಂ 4ನೇ ಕ್ರಾಸ್ ನ ಮನೆಯೊಂದರಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ನಗರ ಸಿಸಿಬಿ ಹಾಗೂ ಅಶೋಕಪುರಂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬೆಟ್ಟಿಂಗ್ ನಡೆಸುತ್ತಿದ್ದ ಜಯಕುಮಾರ್ ನ ಬಂಧಿಸಿದ್ದಾರೆ.
ಬಂಧಿತನಿಂದ 32 ಲಕ್ಷದ 20 ಸಾವಿರ ನಗದು, ಒಂದು ಟಿವಿ, ಒಂದು ಸೆಟ್ ಅಪ್ ಭಾಕ್ಸ್ ಮತ್ತು ನೋಟು ಎಣಿಸುವ ಯಂತ್ರ ಹಾಗೂ ನಾಲ್ಕು ಮೊಬೈಲ್ ಗಳನ್ನ ವಶಪಡಿಸಿಕೊಳ್ಳಲಾಗಿದ್ದು ಕಿಂಗ್ಸ್ ಇಲವೆನ್ ಪಂಜಾಬ್ ಮತ್ತು ಸನ್ ರೈಸರ್ಸ ಹೈದರಾಬಾದ್ ನಡುವಿನ ಪಂದ್ಯಕ್ಕೆ ಬೆಟ್ಟಿಂಗ್ ನಡೆಯುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಅಶೋಕ್ ಪುರಂ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.