ಚಾಮರಾಜನಗರ: ಭಾರತ ಪಾಕಿಸ್ತಾನ ಗಡಿಯಲ್ಲಿ ಬಿಎಸ್ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಗಡಿ ಚಾಮರಾಜನಗರ ಜಿಲ್ಲೆಯ ಯೋಧ ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮದ ನಿವಾಸಿ ಎನ್. ಪುಟ್ಟಸ್ವಾಮಿ ಹೃದಯಾಘಾತದಿಂದ ಮೃತಪಟ್ಟ ಯೋಧ ಇವರು ಕಳೆದ 19 ವರ್ಷಗಳಿಂದ ಬಿಎಸ್ಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಯೋಧ ಪುಟ್ಟಸ್ವಾಮಿಗೆ ಸೋಮವಾರ ಎದೆ ನೋವು ಕಾಣಿಸಿಕೊಂಡು ಅಲ್ಲಿನ ಮಿಲಿಟರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದರೂ ಪ್ರಯೋಜನವಾಗದೆ ಸಾವನ್ನಪ್ಪಿದ್ದಾರೆ. ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲಪೇಟೆ ತಾಲ್ಲೂಕಿನಲ್ಲಿ ಜನಿಸಿರುವ ಪುಟ್ಟಸ್ವಾಮಿ ಕೂಡ್ಲೂರು ಗ್ರಾಮದ ಯುವತಿಯನ್ನು ಮದುವೆಯಾಗಿದ್ದರು. ಇವರಿಗೆ ಇಬ್ಬರು ಪುತ್ರರಿದ್ದಾರೆ.
ಯೋಧ ಪುಟ್ಟಸ್ವಾಮಿರವರ ಮೃತದೇಹ ಬೆಂಗಳೂರಿಗೆ ಮಂಗಳವಾರ ಆಗಮಿಸುವ ಸಾಧ್ಯತೆಯಿದ್ದು, ರಾತ್ರಿ ಚಾಮರಾಜನಗರಕ್ಕೆ ತಲುಪುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದ್ದು, ಬುಧವಾರ ಕೂಡ್ಲೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.