News Kannada
Sunday, October 02 2022

ಮೈಸೂರು

ಕೆ.ಆರ್.ನಗರದಲ್ಲಿ ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ - 1 min read

Photo Credit :

ಕೆ.ಆರ್.ನಗರದಲ್ಲಿ ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ

ಮೈಸೂರು: ಸಾಲಕ್ಕೆ ಹೆದರಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಆರ್.ನಗರ ತಾಲೂಕಿನ ಹರಂಬಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಸರ್ಕಾರ ಸಾಲಮನ್ನಾ ಘೋಷಣೆ ಮಾಡುವ ಮೊದಲೇ ಈ ರೈತ ತನ್ನ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ದುರ್ದೈವದ ಸಂಗತಿಯಾಗಿದೆ.

ಹರಂಬಳ್ಳಿ ಗ್ರಾಮದ ನಿವಾಸಿ ಚಂದ್ರೇಗೌಡ(46) ಆತ್ಮಹತ್ಯೆ ಮಾಡಿಕೊಂಡ ರೈತ. ಈತ ತನ್ನ ಎರಡೂವರೆ ಎಕರೆಯಲ್ಲಿ ಕಬ್ಬು ಬೆಳೆದಿದ್ದನು, ಇದಕ್ಕಾಗಿ ಹೊಸಅಗ್ರಹಾರ ವ್ಯವಸಾಯ ಸಹಕಾರ ಸಂಘದಲ್ಲಿ ಒಂದು ಲಕ್ಷ ಸಾಲ ಮತ್ತು ಜನರಿಂದ ಮೂರು ಲಕ್ಷ ರೂ.ವನ್ನು ಕೈಸಾಲವಾಗಿ ಮಾಡಿಕೊಂಡಿದ್ದನು. ಆದರೆ  ಮಳೆಯ ಕೊರತೆಯಿಂದಾಗಿ ಬೆಳೆ ಒಣಗಿತ್ತು. ಇದರಿಂದ ಮಾಡಿದ ಸಾಲವನ್ನು ತೀರಿಸುವುದು ಹೇಗೆ ಎಂಬ ಚಿಂತೆಯಲ್ಲೇ ಕಾಲ ಕಳೆಯುತ್ತಿದ್ದ ಚಂದ್ರೇಗೌಡ ಬುಧವಾರ ಎಂದಿನಂತೆ ಮನೆಯಲ್ಲಿ ಉಪಹಾರ ಸೇವಿಸಿ ಜಮೀನಿಗೆ ಹೋಗಿ ಬರುವುದಾಗಿ ಹೇಳಿ ಹೋದವನು ಮರಳಿ ಬಂದಿರಲಿಲ್ಲ.

ಜಮೀನಿನಲ್ಲಿ ಕ್ರೀಮಿನಾಶಕ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡ ರೈತರೊಬ್ಬರು ಮಾಹಿತಿ ನೀಡಿದ್ದರಿಂದ ಮನೆಯವರಿಗೆ ವಿಷಯ ಗೊತ್ತಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ನಾಗರಾಜ ಮತ್ತು ಉಪತಹಸೀಲ್ದಾರ್ ಯಧುಗಿರೀಶ್ ಭೇಟಿ ನೀಡಿದ್ದು, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ ಈ ಸಂಬಂಧ ಸಾಲಿಗ್ರಾಮ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಈಗಾಗಲೇ ಸಾಲಬಾಧೆಯಿಂದ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಇದೀಗ ಸರ್ಕಾರ ಸಾಲಮನ್ನಾ ಮಾಡಿರುವುದರಿಂದ ಇನ್ನು ಮುಂದೆಯಾದರೂ ರೈತರ ಆತ್ಮಹತ್ಯೆ ಪ್ರಕರಣ ಕಡಿಮೆಯಾಗುತ್ತದೆಯಾ ಎಂಬುದನ್ನು ಕಾದು ನೋಡಬೇಕಿದೆ.

See also  ಅಂತರ ಕಾಲೇಜು ರೋಬೋಟಿಕ್ ಸ್ಪರ್ಧೆ 'ರೋಬೋಟೀರ್-2016'ಗೆ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು