ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರಿ ಬ್ಯಾಂಕ್ ಗಳಲ್ಲಿನ ರೈತರ ಸಾಲದಲ್ಲಿ 50 ಸಾವಿರ ರೂ.ಗಳನ್ನು ಮನ್ನಾ ಮಾಡಿರುವ ಕ್ರಮವನ್ನು ಸ್ವಾಗತಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಿಸಾನ್ ಖೇತ್ ಮಸ್ದೂರ್ ಕಾಂಗ್ರೆಸ್ ಘಟಕ ಸಂಭ್ರಮಾಚರಣೆಯನ್ನು ಆಚರಿಸಿತು.
ನಗರದ ನ್ಯಾಯಾಲಯದ ಎದುರು ಇರುವ ಗಾಂಧಿ ಪ್ರತಿಮೆ ಮುಂದೆ ಸಮಾವೇಶಗೊಂಡ ಕಾಂಗ್ರೆಸಿಗರು ಸಿಹಿ ಹಂಚಿ ಸಂಭ್ರಮಾಚರಿಸಿದರು. ಇದೇ ಸಂದರ್ಭ ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮೀಗಾ ರವರು ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಸಹಕಾರಿ ಬ್ಯಾಂಕ್ ಗಳಲ್ಲಿನ ರೈತರ ಸಾಲದಲ್ಲಿ 50 ಸಾವಿರ ರೂ.ಗಳನ್ನು ಮನ್ನಾ ಮಾಡಿರುವ ಕ್ರಮವನ್ನು ಸಂತೋಷದ ವಿಚಾರ. ಇದೀಗ ರೈತರ ಸಾಲ ಮನ್ನಾ ಮಾಡಿರುವುದಕ್ಕೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಇದೇ ಸಂದರ್ಭ ಕಿಸಾನ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರಗೌಡ, ರಾಜ್ಯ ಕಾರ್ಯದರ್ಶಿ ಎಸ್.ಸುಹಾಸ್, ನಗರ ಘಟಕದ ಅಧ್ಯಕ್ಷ ಎನ್.ಎ.ನಾಗೇಂದ್ರ ಹಾಗೂ ನಗರ ಘಟಕದ ಪದಾಧಿಕಾರಿಗಳಾದ ಕಮಲೇಶ್ ಕವಾಡ್, ಆನಂದ್, ಕಿರಣ್, ಪರಶಿವಮೂರ್ತಿ ಹಾಗೂ ವಡಿವೇಲನ್ ಮತ್ತಿತರ ಕಾಂಗ್ರೆಸ್ ಮುಖಂಡರು ಹಾಗೂ ಮುಂಚೂಣಿ ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.
ರೈತರ ಸಾಲ ಮನ್ನಮಾಡಿದ್ದಕ್ಕಾಗಿ ಕಿಸಾನ್ ಖೇತ್ ಮಸ್ದೂರ್ ಕಾಂಗ್ರೆಸ್ ಘಟಕ ಸಂಭ್ರಮಾಚರಣೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.