ಮೈಸೂರು: ಆಸ್ಪತ್ರೆ ಕಟ್ಟಡದ ಮೇಲಿಂದ ಬಿದ್ದು ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಕಟ್ಟಡದಿಂದ ಕೆಳಕ್ಕೆ ಜಿಗಿಯುತ್ತಿರುವ ಭಯಾನಕ ದೃಶ್ಯ ಸಮೀಪದ ಅಂಗಡಿ ಮಳಿಗೆದಾರರೊಬ್ಬರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮೈಸೂರಿನ ಕೆ.ಆರ್.ಆಸ್ಪತ್ರೆ ಆವರಣದಲ್ಲಿರುವ ಆಸ್ಪತ್ರೆ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಐದು ಅಂತಸ್ತಿನ ಕಟ್ಟಡದ ಮೇಲಿಂದ ವ್ಯಕ್ತಿ ಏಕಾಏಕಿ ಕಟ್ಟಡದಿಂದ ಜಿಗಿದು ಬಿದ್ದಿದ್ದನ್ನು ಕಂಡು ಸಾರ್ವಜನಿಕರು ಬೆಚ್ಚಿ ಬಿದಿದ್ದಾರೆ. ವ್ಯಕ್ತಿ ಕೆಳಕ್ಕೆ ಜಿಗಿದ ಎದೆ ನಡುಗಿಸುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವ್ಯಕ್ತಿ ಬಿದ್ದ ಸ್ಥಳದಲ್ಲಿ ರಕ್ತದ ಕಲೆಗಳು ಇರಲಿಲ್ಲ ಎಂದು ವರದಿಯಾಗಿದೆ. ಆದರೂ ಅವರ ಸ್ಥಿತಿ ಚಿಂತಾಜನಕವಾಗಿದೆ.
ಸದ್ಯ ವ್ಯಕ್ತಿಗೆ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗ್ತಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಪತ್ನಿಯೂ ಕೂಡ ಇದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆಂದು ತಿಳಿದು ಬಂದಿದೆ.