News Kannada
Tuesday, November 29 2022

ಮೈಸೂರು

ಕೊಲೆ, ಅತ್ಯಾಚಾರ ದೌರ್ಜನ್ಯ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಬೃಹತ್ ಪ್ರತಿಭಟನೆ - 1 min read

Photo Credit :

ಕೊಲೆ, ಅತ್ಯಾಚಾರ ದೌರ್ಜನ್ಯ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಬೃಹತ್ ಪ್ರತಿಭಟನೆ

ಮೈಸೂರು: ಬಹುಜನ ಸಮಾಜ ಪಾರ್ಟಿವತಿಯಿಂದ ದಲಿತರ, ಅಲ್ಪಸಂಖ್ಯಾತರ, ಹಿಂದುಳಿದವರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ನಗರದ ರಾಮಸ್ವಾಮಿ ವೃತ್ತದಿಂದ ಅರಮನೆ ಮುಂಭಾಗದ ಕೋಟೆ ಅಂಜನೇಯಸ್ವಾಮಿ ದೇವಸ್ಥಾನದ ವರಗೆ ರ್ಯಾಲಿ ನಡೆಸಲಾಯಿತು.

ಪ್ರತಿಭಟನಾ ರ್ಯಾಲಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಮಾತನಾಡಿ ಪ್ರಧಾನಿ ನರೇಂದ್ರ ಮೋಧಿಯವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸರ್ವರ ಜೊತೆಗೂಡಿ ಸರ್ವರ ಅಭಿವೃದ್ಧಿ ಘೋಷಣೆಯನ್ನು ನಂಬಿದ ದೇಶದ ಬಹುಸಂಖ್ಯಾತ ಪ್ರಜೆಗಳು 2014 ರಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ನೀಡಿ ಕೇಂದ್ರದಲ್ಲಿ ಅಧಿಕಾರಕ್ಕೆ ತಂದರು. ಅಧಿಕಾರಕ್ಕೆ ಬಂದ ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ಜನರ ದಿನನಿತ್ಯದ ಸಮಸ್ಯೆಗಳನ್ನು ಬಗೆಹರಿಸುವ ಬದಲು ತನ್ನ ಸಂಘ ಪರಿವಾರದ ಆರ್ ಎಸ್ಎಸ್ ನ ಹಿಡನ್ ಅಜೆಂಡಾವನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವುದು. ಈ ದೇಶದ ಜನತೆಗೆ ಮಾಡಿದ ದ್ರೋಹವಾಗಿದೆ.

ದೇಶದ ಅತಿದೊಡ್ಡದಾದ ಉತ್ತರ ಪ್ರದೇಶದ ಚುನಾವಣೆಯಲ್ಲಿ ವಿದ್ಯುನ್ಮಾನ ಯಂತ್ರಗಳನ್ನು ದುರ್ಬಳಕೆ ಮಾಡಿಕೊಂಡು ಮೋಸದಿಂದ ಅಧಿಕಾರ ಪಡೆದುಕೊಂಡರು. ಇವರ 2 ತಿಂಗಳ ಆಡಳಿತದ ಅವಧಿಯಲ್ಲಿ ಉತ್ತರ ಪ್ರದೇಶದಲ್ಲಿ 803 ಅತ್ಯಾಚಾರ, 729 ಕೊಲೆಗಳು, 799 ಕೊಲೆ ಪ್ರಕರಣಗಳು, 2682 ಅಪಹರಣಗಳು ನಡೆದಿರುವುದು ವರದಿಯಾಗಿದೆ. ಈ ಎಲ್ಲಾ ಪ್ರಕರಣಗಳ ಶೇ.80 ರಷ್ಟು ದಲಿತರು ಹಾಗೂ ಮುಸಲ್ಮಾನರ ಮೇಲೆ ನಡೆದಿದೆ. ಅಕ್ಕ ಮಾಯಾವತಿಯವರು ಶೋಷಿತರ ಪರವಾಗಿ ತೆಗೆದುಕೊಂಡಿರುವ ಈ ದಿಟ್ಟ ನಿರ್ಧಾರವನ್ನು ಬೆಂಬಲಿಸಲು ಮತ್ತು ಕೇಂದ್ರ ಸರ್ಕಾರದ ಜನ ವಿರೋಧಿ ಮತ್ತು ಸಂವಿಧಾನ ವಿರೋಧಿ ನೀತಿಯ ವಿರುದ್ಧ ಕರ್ನಾಟಕ ರಾಜ್ಯಾದ್ಯಂತ ವಿವಿಧ ಹಂತಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪ್ರತಿಭಟನಾ ರ್ಯಾಲಿಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

See also  ಯರಗನಹಳ್ಳಿಯಲ್ಲಿ ಬೋನಿಗೆ ಬಿದ್ದ ಚಿರತೆ ಮರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು