News Kannada
Tuesday, September 27 2022

ಮೈಸೂರು

ಹೆಚ್.ಡಿ.ರೇವಣ್ಣರಿಂದ ಮಹಾಮಸ್ತಕಾಭಿಷೇಕದ ಕಾರ್ಯ ಪರಿಶೀಲನೆ - 1 min read

Photo Credit :

ಹೆಚ್.ಡಿ.ರೇವಣ್ಣರಿಂದ ಮಹಾಮಸ್ತಕಾಭಿಷೇಕದ ಕಾರ್ಯ ಪರಿಶೀಲನೆ

ಶ್ರವಣಬೆಳಗೊಳ: 2018ರಲ್ಲಿ ಜರುಗಲಿರುವ ಮಹಾಮಸ್ತಕಾಭಿಷೇಕದ ಹಿನ್ನಲೆಯಲ್ಲಿ ಶ್ರವಣಬೆಳಗೊಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಆಶೀರ್ವಾದ ಪಡೆದುದಲ್ಲದೆ, ಕ್ಷೇತ್ರದಲ್ಲಿ ನಡೆಯುತ್ತಿರುವ ಕೆಲಸ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಯಾವುದೇ ಕಪ್ಪುಚುಕ್ಕೆ ಬಾರದಂತೆ, ಯಶಸ್ವಿಯಾಗಿ ನೆರವೇರಿಸಲು ಸಂಸತ್ ಸದಸ್ಯರಾಗಿ ಕೇಂದ್ರ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಮಾಡಲು ತಂದೆ ದೇವೇಗೌಡರು ಸಿದ್ದರಿದ್ದಾರೆ. ದೇವೇಗೌಡರವರು ದೂರವಾಣಿ ಕರೆ ಮಾಡಿ ಶ್ರವಣಬೆಳಗೊಳದ ಮಹಾಮಸ್ತಕಾಭಿಷೇಕ ಕಾಮಗಾರಿಗಳು ಹೇಗೆ ನಡೆಯುತ್ತಿವೆ ಎಂದು ನೋಡಿಕೊಂಡು ಬರಲು ತಿಳಿಸಿದ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಕೇಂದ್ರ ಸರ್ಕಾರದ ವತಿಯಿಂದ ಆಗಬೇಕಾದ ರಸ್ತೆಗಳು, ರೈಲ್ವೆ ಇಲಾಖೆಗೆ ಸಂಬಂಧಿಸಿದ ಕೆಲಸಗಳು ಹಾಗೂ ಇನ್ನಿತರ ಕಾಮಗಾರಿಗಳನ್ನು ಸಂಸದನಾಗಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ದೇವೇಗೌಡರು ತಿಳಿಸಿದ್ದಾರೆ ಎಂದರು.

2006ರ ಮಹೋತ್ಸವಕ್ಕೆ ಕೇಂದ್ರ ಸರ್ಕಾರ 250 ಕೋಟಿ ರೂ. ಹಣ ಬಿಡುಗಡೆ ಮಾಡಿತ್ತು ಹಾಗೂ ಹಾಸನ-ಬೆಂಗಳೂರು ಚತುಷ್ಪಥ ರಸ್ತೆ ನಿರ್ಮಾಣಕ್ಕೆ 2700 ಕೋಟಿ ನೀಡಲಾಗಿತ್ತು. ಅದೇ ರೀತಿ ಈ ಬಾರಿ ದೇವೇಗೌಡರು ನಿತಿನ್ ಗಡ್ಕರಿಯವರಿಗೆ ಬರೆದ ಪತ್ರದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಅಭಿವೃದ್ದಿ ಹಾಗೂ ಮಹಾಮಸ್ತಕಾಭಿಷೇಕಕ್ಕೆ ಸಂಬಂಧಿಸಿದಂತೆ ಈಗಾಗಲೇ 100 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದಾರೆ. ಮತ್ತೆ 200 ಕೋಟಿ ಬಿಡುಗಡೆ ಮಾಡಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಲಾಗಿದ್ದು, ಮುಖ್ಯಮಂತ್ರಿಯವರೂ ಪತ್ರ ಬರೆದಿದ್ದಾರೆ ಎಂದರು.

ರಾಜ್ಯ ಸರ್ಕಾರ, ಜಿಲ್ಲಾ ಮಂತ್ರಿಯವರು, ಜಿಲ್ಲಾಡಳಿತ ಎಲ್ಲಾ ಒಟ್ಟಿಗೆ ಸೇರಿ ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಮನವಿ ಮಾಡಿದರು. ಶ್ರವಣಬೆಳಗೊಳವನ್ನು ಕೇಂದ್ರವಾಗಿಟ್ಟುಕೊಂಡು ಇಲ್ಲಿಗೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಅಭಿವೃದ್ದಿಪಡಿಸಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ತಾತ್ಕಾಲಿಕ ಶೆಡ್ಗಳ ನಿರ್ಮಾಣಕ್ಕೆ ನಿಗದಿ ಮಾಡಲಾಗಿದ್ದ 75 ಕೋಟಿಯಲ್ಲಿ 15 ಕೋಟಿ ಉಳಿದಿದ್ದು ಇದಕ್ಕೆ 10 ಕೋಟಿ ಸೇರಿಸಿ 25 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ವಸತಿ ಸೌಕರ್ಯ ಕಟ್ಟಡಗಳನ್ನು ನಿರ್ಮಾಣ ಮಾಡಬೇಕು. ವಾರದಲ್ಲಿ 2 ದಿನ ಶ್ರವಣಬೆಳಗೊಳ ಮತ್ತು ಹಾಸನದಲ್ಲಿ ಸಭೆ ನಡೆಸಬೇಕು.

ನೂತನವಾಗಿ ಹಾಸನಕ್ಕೆ ಬಂದಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರು ಮಹಾಮಸ್ತಕಾಭಿಷೇಕ ಮಹೋತ್ಸವ ಕೆಲಸಗಳನ್ನು ತುಂಬಾ ಮುತುವರ್ಜಿ ವಹಿಸಿ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಪ್ರವಾಸೋಧ್ಯಮ ಇಲಾಖೆ ಮಂತ್ರಿಗಳು ಇಲ್ಲೇ 2 ದಿನ ಬೀಡು ಬಿಟ್ಟು ಪ್ರವಾಸಿಗರ ಸೂಕ್ತ ಸೌಲಭ್ಯ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಹಾಗೂ ಹೊರ ರಾಜ್ಯಗಳ ಪ್ರವಾಸೋಧ್ಯಮ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ ಹೊರ ರಾಜ್ಯದ ಪ್ರವಾಸಿಗರನ್ನು ಆಕರ್ಷಿಸುವ ಯೋಜನೆ ರೂಪಿಸಬೇಕು ಎಂದರು.

ಈಗಾಗಲೇ ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ, ಹಣಕಾಸು ಮಂತ್ರಿ, ನಿತಿನ್ ಗಡ್ಕರಿ, ಈಗಿನ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಸುರೇಶ್ ಪ್ರಭು, ರೈಲ್ವೆ ಅಧಿಕಾರಿಗಳು ಮುಂತಾದವರನ್ನು ದೇವೇಗೌಡರು ಹಾಗೂ ನಾನು ಮೂರ್ನಾಲ್ಕು ಬಾರಿ ಭೇಟಿ ಮಾಡಲಾಗಿದ್ದು, ಮಹಾಮಸ್ತಕಾಭಿಷೇಕಕ್ಕೆ ಸಂಬಂಧಿಸಿದಂತೆ ಚರ್ಷಿಸಲಾಗಿದೆ ಎಂದು ತಿಳಿದರು.

See also  ಹೊಸ ವರ್ಷಕ್ಕ ಬೆರಟಹಳ್ಳಿಗೆ ಹರಿದು ಬಂದ ಭಕ್ತಸಾಗರ!

ಶಾಸಕ ಸಿ.ಎನ್.ಬಾಲಕೃಷ್ಣ, ತಾಲೂಕು ಜೆ.ಡಿ.ಎಸ್.ಅಧ್ಯಕ್ಷ ಪರಮ ದೇವರಾಜೇಗೌಡ, ಪರಮ ಕೃಷ್ಣೇಗೌಡ, ಜಿಪಂ ಸದಸ್ಯೆ ಮಮತಾ ರಮೇಶ್, ತಾಪಂ ಸದಸ್ಯೆ ಮಹಾಲಕ್ಷ್ಮಿ ಶಿವರಾಜ್, ಗ್ರಾಪಂ ಅಧ್ಯಕ್ಷೆ ಹೇಮಾ ಪ್ರಭಾಕರ್ ಇದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು