News Kannada
Monday, October 03 2022

ಮೈಸೂರು

ದಸರಾ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿದ ಸಚಿವೆ ಉಮಾಶ್ರೀ - 1 min read

Photo Credit :

ದಸರಾ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿದ ಸಚಿವೆ ಉಮಾಶ್ರೀ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ – 2017ರ ಮಹಿಳಾ ದಸರಾ ಕಾರ್ಯಕ್ರಮದ ಪ್ರಯುಕ್ತ ಮಹಿಳೆಯರಿಗಾಗಿ ಮೈಸೂರು ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದ ಆವರಣದಲ್ಲಿ ರಂಗೋಲಿ ಸ್ಫರ್ಧೆ ಯನ್ನು ಆಯೋಜಿಸಲಾಗಿತ್ತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ರಂಗೋಲಿ ಚಿತ್ರಬಿಡಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಈ ರಂಗೋಲಿ ಸ್ಪರ್ಧೆಯಲ್ಲಿ ವಯಸ್ಸಿನ ಅಂತರವಿಲ್ಲದೇ 85 ಜನ ಮಹಿಳಾ ಮಣಿಗಳು ಭಾಗವಹಿಸಿದ್ದು ,ವಿವಿಧ ಭಂಗಿಯ ವಿನ್ಯಾಸದಲ್ಲಿ ಆಂಬಾರಿ ಹೊತ್ತ ಆನೆ , ನಮ್ಮ ದೇಶದ ಗಡಿಯನ್ನು ಕಾಯುತ್ತಿರುವ ಯೋಧರಿಗೆ ನಮನ, ನೀರನ್ನ ವ್ಯಯ ಮಾಡಬೇಡಿ ಹಾಗೂ ಹುಟ್ಟೋ ಮಗು ಹೆಣ್ಣು ಎಂದು ತಿಳಿದು ಭ್ರೂಣ ಹತ್ಯೆ ಮಾಡಬೇಡಿ ಎಂಬ ಸಂದೇಶ ಸಾರುವ  ಬಣ್ಣ ಬಣ್ಣದ ಚಿತ್ತಾಕರ್ಷಕ ರಂಗೋಲಿಗಳು ಗಮನ ಸೆಳೆದವು.ಇನ್ನೂ ಉಳಿದ ಆಕರ್ಷಕ ರಂಗೋಲಿಗಳು ಜನರ ಮೆಚ್ಚುಗೆ ಪಡೆದವು.

ಇನ್ನೂ ಸಾರ್ವಜನಿಕರು ಆಕರ್ಷಕ ರಂಗೋಲಿಯ ಪಕ್ಕ ನಿಂತು ಫೋಟೋ ತೆಗೆಸಿಕೊಂಡರು. ಈ ಸಂದರ್ಭ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ, ಶೋಭಾ,ವಸುಂದರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

See also  ಟಿಆರ್ ಪಿ ದಾಹದಲ್ಲಿ ಬೇರೆಯವರ ಚಾರಿತ್ರ್ಯವಧೆ ಒಳ್ಳೆಯದಲ್ಲ: ಪ್ರತಾತ್ ಸಿಂಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು