News Kannada
Tuesday, October 04 2022

ಮೈಸೂರು

ಸ್ವಚ್ಛ ಪರಿಸರ ನಿರ್ಮಾಣಕ್ಕೆ ಪೌರ ಕಾರ್ಮಿಕರ ಸಿಂಗಾಪುರ ಪ್ರವಾಸ: ಸಿಎಂ - 1 min read

Photo Credit :

ಸ್ವಚ್ಛ ಪರಿಸರ ನಿರ್ಮಾಣಕ್ಕೆ ಪೌರ ಕಾರ್ಮಿಕರ ಸಿಂಗಾಪುರ ಪ್ರವಾಸ: ಸಿಎಂ

ಬೆಂಗಳೂರು: ವಿದೇಶಗಳ ಅಭಿವೃದ್ಧಿ ಹಾಗೂ ಇತರೆ ವಿಷಯಗಳು ಕುರಿತು ಇಲ್ಲಿಯವರೆಗೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಸೇರಿ ದೊಡ್ಡ ಹುದ್ದೆಗಳಲ್ಲಿದ್ದವರು ಮಾತ್ರ ಅಧ್ಯಯನ ಪ್ರವಾಸ ಕೈಗೊಳ್ಳುತ್ತಿದ್ದರು, ಸ್ವಚ್ಛತೆ ಮತ್ತು ಅದರ ಕುರಿತು ತಂತ್ರಜ್ಞಾನದ ಹೆಚ್ಚಿನ ಅಧ್ಯಯನಕ್ಕಾಗಿ ಪೌರಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿರುವುದು ಉತ್ತಮ ಪರಿಸರ ನಿರ್ಮಾಣಕ್ಕೆ ಸಹಾಯಕವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ವಿವಿಧ ವಿಧಾನಗಳ ಬಗ್ಗೆ ಹೆಚ್ಚಿನ ಅಧ್ಯಯನಕ್ಕಾಗಿ ಬಿಬಿಎಂಪಿಯ 39 ಪೌರಕಾರ್ಮಿಕರು ಹಾಗೂ ಮೂವರು ಅಧಿಕಾರಿಗಳು ಸೇರಿ ಒಟ್ಟು 42 ಜನರ ತಂಡ ಅಕ್ಟೋಬರ್ 24ರಂದು 4 ದಿನಗಳ ಕಾಲ ಸಿಂಗಾಪುರ ಪ್ರವಾಸ ಕೈಗೊಳ್ಳಲಿದ್ದು ಅವರಿಗೆ ಬೀಳ್ಕೊಡುಗೆ ನೀಡಿ ಮಾತನಾಡಿ, ಸ್ವಚ್ಛತಾ ಕಾರ್ಯದಲ್ಲಿ ಯಾಂತ್ರಿಕರಣ ಬಳಕೆಯಿಂದ ಉತ್ತಮ ಪರಿಸರ ನಿರ್ಮಿಸಲು ಸಾಧ್ಯ ಹಾಗೂ ಇದರಿಂದ ಮಾನವ ಶ್ರಮ ಕಡಿಮೆಯಾಗುತ್ತದೆ ಎಂದು ತಿಳಿಸಿದರು.

ಸಿಂಗಾಪುರ ಪ್ರವಾಸಿಗರ ಆಕರ್ಷಣಿಯ ದೇಶವಾಗಿದ್ದು, ಅಲ್ಲಿನ ಜನರಿಗೆ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಅರಿವಿದೆ. ಅಲ್ಲಿ ತಮಿಳು ಜನರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಭಾರತೀಯ ಊಟ, ಉಪಾಹಾರ ದೊರೆಯುತ್ತದೆ ಎಂದು ಕಿವಿಮಾತು ಹೇಳಿದರು. ನಾನೂ 20 ವರ್ಷದ ಹಿಂದೆ ಒಂದು ಬಾರಿ ಸಿಂಗಾಪುರಕ್ಕೆ ಹೋಗಿದ್ದು, ಅದು ಇತ್ತೀಚೆಗೆ ಅಭಿವೃದ್ಧಿಯಾದ ಪುಟ್ಟ ದೇಶ. ಪ್ರವಾಸೋದ್ಯಮವನ್ನೇ ಅವಲಂಭಿಸಿದೆ ಎಂದು ತಿಳಿಸಿದರು.

ಪೌರಕಾರ್ಮಿಕರು ಸಹ ಸ್ವಾಭಿಮಾನದಿಂದ ಬಾಳಬೇಕು. ನಿಮ್ಮ ಮಕ್ಕಳೂ ವಿದ್ಯಾವಂತರಾಗಬೇಕು. ಇದಕ್ಕಾಗಿ ವೇತನವನ್ನು ಹೆಚ್ಚಿಸಲಾಗಿದ್ದು, ಜೊತೆಗೆ ಮಧ್ಯಾಹ್ನದ ಬಿಸಿಯೂಟ ಒದಗಿಸುವ ಕಾರ್ಯಕ್ರಮವನ್ನು ಮನೆ ಕಟ್ಟಿಕೊಳ್ಳಲು 7 ಲಕ್ಷ ರೂ. ನೀಡಲಾಗುತ್ತಿದೆ ಎಂದು ತಿಳಿಸಿದರು.

See also  ಜನರ ಆರ್ಭಟಕ್ಕೆ ತಾಯಿಯಿಂದ ಬೇರ್ಪಟ್ಟ ಮರಿಯಾನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು