News Kannada
Friday, October 07 2022

ಮೈಸೂರು

ಮೈಸೂರಲ್ಲಿ ಸಂಭ್ರಮದ 62ನೇ ಕನ್ನಡ ರಾಜೋತ್ಸವ ಆಚರಣೆ - 1 min read

Photo Credit :

ಮೈಸೂರಲ್ಲಿ ಸಂಭ್ರಮದ 62ನೇ ಕನ್ನಡ ರಾಜೋತ್ಸವ ಆಚರಣೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಯ ಆವರಣದಲ್ಲಿರುವ ರಾಜ್ಯದ ಏಕೈಕ ಭುವನೇಶ್ವರಿ ದೇವಸ್ಥಾನದಲ್ಲಿ ಇಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಪೂಜೆ ಸಲ್ಲಿಸುವ ಮೂಲಕ ವಿಶಿಷ್ಟವಾಗಿ 62ನೇ ರಾಜ್ಯೋತ್ಸವವನ್ನ ಆಚರಿಸಲಾಯಿತು.

ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ನಿರ್ಮಾಣವಾಗಿರುವ ವಿಶ್ವವಿಖ್ಯಾತ ಮೈಸೂರು ಅರಮನೆಯ ಮುಂಭಾಗದಲ್ಲಿರುವ ಭುವನೇಶ್ವರಿ ದೇವಸ್ಥಾನದಲ್ಲಿ ಭುವನೇಶ್ವರಿ ತಾಯಿಗೆ ವರ್ಷದ 365 ದಿನಗಳು ನಿತ್ಯವೂ ವಿಶೇಷ ಪೂಜೆ, ಅಭೀಷೇಕ ನಡೆಯುವ ರಾಜ್ಯದ ಏಕೈಕ ಭುವನೇಶ್ವರಿ ದೇವಾಲಯ ಈದಾಗಿದೆ ಇಲ್ಲಿ ರಾಜ್ಯೋತ್ಸವದ ಸಂದರ್ಭದಲ್ಲಿ ವಿಶೇಷ ಪೂಜೆ ನಡೆಯುತ್ತದೆ.

ಇಂದು 62ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡಾಂಬೆ ಭುವನೇಶ್ವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ, ನಗರ ಪೊಲೀಸ್ ಕಮಿಷನರ್ ಭಾಗವಹಿಸಿದ್ದು ನಂತರ ಕೋಟೆ ಅಂಜೇನಯ ದೇವಲಾಯದ ಮುಂಭಾಗ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಜಿಲ್ಲಾಡಳಿತವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಅಗಲಿದ ಶಾಸಕ ಚಿಕ್ಕಮಾದುರವರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ಡಾ ಹೆಚ್.ಸಿ.ಮಹದೇವಪ್ಪ ಮಾತನಾಡಿ ರಾಜ್ಯ ಸರ್ಕಾರ ಸರ್ವಾಂಗೀಣ ಅಭಿವೃದ್ದಿ ಸಾಧಿಸುವ ನಿಟ್ಟಿನಲ್ಲಿ ಹತ್ತು ಹಲವು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ನಮ್ಮ ರಾಜ್ಯ ಇತಿಹಾಸ ದಿಂದಲೂ ಸಮಾನತೆ ಹಾಗೂ ಸಾಮರಸ್ಯ ಬದುಕನ್ನು ಕಲ್ಪಿಸುವ ನಾಡಾಗಿ ಹೆಸರು ಪಡೆದಿದೆ. ವ್ಯಾವಹಾರಿಕವಾಗಿ ಕನ್ನಡದ ಬಳಕೆ ಹೆಚ್ಚಾದರೆ ಕನ್ನಡ ಭಾಷೆ ಬೆಳೆಯುತ್ತದೆ ಎಂದು ಹೇಳಿದರು.

See also  ಎಸ್ಸೆಸ್ಸೆಲ್ಸಿಯಲ್ಲಿ ಮೈಸೂರಿನ ಯಶಸ್ ರಾಜ್ಯಕ್ಕೆ ಟಾಪರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು