News Kannada
Thursday, September 29 2022

ಮೈಸೂರು

ನಾನು ಬಿಜೆಪಿ ಬಿಡುವುದಿಲ್ಲ: ಶ್ರೀನಿವಾಸ್ ಪ್ರಸಾದ್ - 1 min read

Photo Credit :

ನಾನು ಬಿಜೆಪಿ ಬಿಡುವುದಿಲ್ಲ: ಶ್ರೀನಿವಾಸ್ ಪ್ರಸಾದ್

ಮೈಸೂರು: ವೈಯಕ್ತಿಕ ಕಾರಣಗಳಿಂದ ಪರಿವರ್ತಾನ ರ್ಯಾಲಿಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಾಕ್ಷರಾದ ಬಿ.ಎಸ್ ಯಡಿಯೂರಪ್ಪ ಅವರಿಗೆ ತಿಳಿಸಿದ್ದೇನೆ. ಆದ್ದರಿಂದ ಪರಿವರ್ತನಾ ರ್ಯಾಲಿಯಲ್ಲಿ ಭಾಗವಹಿಸಲ್ಲ ಎಂದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಸ್ಪಷ್ಟ ಪಡಿಸಿದ್ದಾರೆ.

ಈ ಬಗ್ಗೆ ದೂರವಾಣಿಯಲ್ಲಿ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ನಿನ್ನೆ ಬಿಜೆಪಿಯ ಪರಿವರ್ತನಾ ರ್ಯಾಲಿಗೆ ಭಾಗವಹಿಸಲು ಆಹ್ವಾನ ಬಂದಿಲ್ಲ ಎಂದು ಕೆಲವು ಮಾಧ್ಯಮಗಳು ಬಿತ್ತರಿಸುತ್ತಿರುವ ಬಗ್ಗೆ ಸ್ಪಷ್ಟೀಕರಣ ನೀಡಿದ ಶ್ರೀನಿವಾಸ್ ಪ್ರಸಾದ್, ತಮ್ಮ ಹತ್ತಿರದ ಸಂಬಂಧಿಯೊಬ್ಬರು ತೀರಿಕೊಂಡಿದ್ದು, ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತೆರಳಿದ್ದೇ. ಈ ಬಗ್ಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಾಕ್ಷ ಬಿ.ಎಸ್ ಯಡಿಯೂರಪ್ಪನವರಿಗೆ ತಿಳಿಸಿದ್ದೇನೆ.

ನಾನು ಆರೋಗ್ಯವಾಗಿದ್ದೇನೆ, ಇಂದು 11 ಗಂಟೆಯ ಸುಮಾರಿಗೆ ಖುದ್ದು ಯಡಿಯೂರಪ್ಪ ಫೋನ್ ಮೂಲಕ ಮಾತನಾಡಿ ನಮ್ಮ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಆವರಿಗೆ ನಾನು ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದೇನೆ. ನಾನು ಬಿಜೆಪಿ ಪರವಾಗಿ ಮೈಸೂರು ಚಾಮರಾಜನಗರ ಜಿಲ್ಲೆಯಲ್ಲಿ ಮುಂದಿನ ವಿಧಾನ ಸಭೆ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸಕ್ರೀಯವಾಗಿ ಪ್ರಚಾರದಲ್ಲಿ ಭಾಗವಹಿಸುತ್ತೇನೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೇ ಮಾಡುವ ಸಿದ್ದರಾಮಯ್ಯನವರನ್ನ ಸೋಲಿಸುವುದೇ ನನ್ನ ರಾಜಕೀಯದ ಅಂತಿಮ ಗುರಿ ಎಂದು ಹೇಳಿದ ಶ್ರೀನಿವಾಸ್ ಪ್ರಸಾದ್ ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆ ಇಲ್ಲ. ಮಾಧ್ಯಮಗಳಲ್ಲಿ ಬಂದಿರುವ ಎಲ್ಲಾ ವರದಿಗಳು ಸಂಪೂರ್ಣ ಸುಳ್ಳಾಗಿದ್ದು, ಈ ಬಗ್ಗೆ ನಾಳೆ ಪತ್ರಿಕಾಗೋಷ್ಟಿ ಕರೆದು ನನ್ನ ಬಗ್ಗೆ ಹರಿಡಿರುವ ಸುದ್ದಿಗಳ ಬಗ್ಗೆ ಸ್ಪಷ್ಟೀಕರಣ ನೀಡುತ್ತೇನೆ ಎಂದರು.

 

See also  ಕೆಲಸ ಖಾಯಂಗೊಳಿಸಲು ಐಟಿಸಿ ನೌಕರರ ಒತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು