News Kannada
Wednesday, October 05 2022

ಮೈಸೂರು

ವಲಸೆ ಹೋದ ಜೆಡಿಎಸ್ ನಾಯಕರು ಮರಳಿ ಗೂಡು ಸೇರಲು ತವಕ - 1 min read

Photo Credit :

ವಲಸೆ ಹೋದ ಜೆಡಿಎಸ್ ನಾಯಕರು ಮರಳಿ ಗೂಡು ಸೇರಲು ತವಕ

ಮೈಸೂರು: ಇನ್ನೇನು ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆಯು ಎದುರಾಗುತ್ತಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಲ್ಲಿ ಕಡೆಗಣಿಸಲ್ಪಟ್ಟಿರುವ ಜೆಡಿಎಸ್ ನಿಂದ ವಲಸೆ ಹೋಗಿದ್ದ ನಾಯಕರು ಮರಳಿ ಬರಲು ಹಾತೊರೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ರಾಜಕೀಯ ಬೆಳವಣಿಗೆಯಿಂದಾಗಿ ಕೆಲವರು ಜೆಡಿಎಸ್ ತೊರೆದು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ಸೇರಿಸಿಕೊಂಡಿದ್ದಾರೆ. ಆದರೆ ಅವರಿಗೆ ಅಲ್ಲಿ ಸೂಕ್ತ ಸ್ಥಾನಮಾನ ಸಿಗದೆ ಹೊರಗಿನವರಂತೆ ನಡೆಸಿಕೊಳ್ಳಲಾಗುತ್ತಿತ್ತು. ಇದರಿಂದ ಅಸಮಾಧಾನಗೊಂಡಿರುವ ಜೆಡಿಎಸ್ ನಿಂದ ವಲಸೆ ಹೋಗಿದ್ದ ನಾಯಕರು ಮರಳಿ ಗೂಡಿಗೆ ಬರಲು ನಿರ್ಧರಿಸಿದ್ದಾರೆ.

ಜೆಡಿಎಸ್ ಗೆ ಮರಳುವ ನಾಯಕರು ತಮಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ಬೇಡಿಕೆಯನ್ನಿಟ್ಟಿದ್ದಾರೆ ಎಂದು ಉತ್ತರ ಕರ್ನಾಟಕದ ಜೆಡಿಎಸ್ ನ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಜೆಡಿಎಸ್ ಸಿದ್ಧಾಂತದ ಬಗ್ಗೆ ನಂಬಿಕೆ ಇರುವವರು ಮರಳಿ ಬರಬಹುದು. ಕೆಲವು ನಾಯಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ತಿಳಿಸಿದ್ದಾರೆ.

See also  ಚಾಮುಂಡಿಬೆಟ್ಟದಲ್ಲಿ ಆಕಸ್ಮಿಕ ಬೆಂಕಿ:50 ಎಕರೆ ಅರಣ್ಯ ಭಸ್ಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು