News Kannada
Friday, October 07 2022

ಮೈಸೂರು

83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಥಕ್ಕೆ ಚಾಲನೆ - 1 min read

Photo Credit :

83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಥಕ್ಕೆ ಚಾಲನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದದ ಪ್ರಚಾರದ ರಥ ಹಾಗೂ ನೊಂದಣಿ ಕಛೇರಿಯನ್ನ ಇಂದು ಅಧಿಕೃತವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಚಾಲನೆ ನೀಡಿದರು.

ಇಂದು ನಗರದ ಪಡುವಾರಹಳ್ಳಿಯಲ್ಲಿರುವ ಡಾ. ಬಾಬು ಜಗಜೀವನ್ ರಾಂ ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಗಳ ನೋಂದಣಿ ಕಚೇರಿಯನ್ನು ಹಾಗೂ ಮಹಾರಾಜ ಕಾಲೇಜು ಮೈದಾನದಲ್ಲಿ ಸಮ್ಮೇಳನದ ರಥಕ್ಕೆ ಬಾವುಟ ಹಾರಿಸಿವುದರ ಮೂಲಕ ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಸಚಿವರು ಮೈಸೂರಿನಲ್ಲಿ 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇದುವರೆಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ 7575 ಪ್ರತಿನಿಧಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಅದರಲ್ಲಿ ಪುರುಷರು 4982 ,ಹಾಗೂ ಮಹಿಳೆಯರು 1793 ಪ್ರತಿನಿಧಿಗಳು ನೋಂದಾಯಿಸಿಕೊಂಡಿದ್ದಾರೆ.

ರಾಜ್ಯದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಗಳಲ್ಲಿ ಪ್ರತಿನಿಧಿಯಾಗಿ ನೋಂದಾಯಿಸಿಕೊಳ್ಳುವವರ ಅವಧಿ ನವೆಂಬರ್ 10 ರಂದು ಮುಕ್ತಾಯಗೊಂಡಿದೆ. ಸ್ಥಳೀಯರಿಗೆ ಹೆಚ್ಚಿನ ಅವಕಾಶಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ರವರಗೆ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಸಮ್ಮೇಳನದ ದಿನ ಒತ್ತಡ ಕಡಿಮೆ ಮಾಡಲು ಈ ಕಚೇರಿಯನ್ನು ಉದ್ಘಾಟಿಸಲಾಗಿದೆ. ಎಲ್ಲಾರು ಒಗ್ಗೂಡಿ ಕನ್ನಡ ಸಾಹಿತ್ಯ ಸಮ್ಮೇಳನದ ತೇರನ್ನು ಎಳೆಯೋಣ ಎಂದರು. ಇದಾದ ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ಜಿಲ್ಲೆಯಾದ್ಯಂತ ಸಂಚರಿಸುವ ಕನ್ನಡ ತೇರಿಗೆ ಚಾಲನೆ ನೀಡಿದರು. ಸಮ್ಮೇಳನದ ಕಾರ್ಯಕ್ರಮಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.

See also  ತಮಿಳುನಾಡು ಗಡಿಯಲ್ಲಿ ನಕ್ಸಲ್ ಕಾರ್ಯಾಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು