News Kannada
Tuesday, October 04 2022

ಮೈಸೂರು

ಆಹ್ವಾನ ಪತ್ರಿಕೆ ಯಡವಟ್ಟು: ಸಚಿವ ಮಹದೇವಪ್ಪ ಕೈವಾಡ? - 1 min read

Photo Credit :

ಆಹ್ವಾನ ಪತ್ರಿಕೆ ಯಡವಟ್ಟು: ಸಚಿವ ಮಹದೇವಪ್ಪ ಕೈವಾಡ?

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ನ.24 ರಿಂದ 26ರವರೆಗೆ ಮೂರು ದಿನ ಕಾಲ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳಕ್ಕೆ ಕಾಂಗ್ರೆಸ್ ಶಾಸಕರ ಹೆಸರನ್ನ ಆಹ್ವಾನ ಪತ್ರಿಕೆಯಲ್ಲಿ ಹಾಕದೇ ಮತ್ತೊಂದು ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದ್ದು, ಇದರ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರ ಕೈವಾಡ ವಿದೆ ಎಂಬ ಆರೋಪ ಕೇಳಿ ಬಂದಿದೆ.

83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಈ ಸಮಯದಲ್ಲಿ ಜಿಲ್ಲೆಯಿಂದ ಆಯ್ಕೆಯಾದ ಜನಪ್ರತಿನಿಧಿಗಳನ್ನು ಶಿಷ್ಟಾಚಾರದಂತೆ ಕಾರ್ಯಕ್ರಮಕ್ಕೆ ಆಹ್ವಾನಿಸುವುದು ಮತ್ತು ಆಮಂತ್ರಣ ಪತ್ರದಲ್ಲಿ ಅವರ ಹೆಸರು ಮುದ್ರಿಸುವುದು ವಾಡಿಕೆ. ಆದರೆ ಈ ಸಮ್ಮೇಳನದ ಆಹ್ವಾನ ಪತ್ರಿಕೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ನಂಜನಗೂಡು ಮೀಸಲು ವಿಧಾನಸಭಾಕ್ಷೇತ್ರದಿಂದ ಉಪಚುನಾವಣೆಯಲ್ಲಿ ಚುನಾಯಿತರಾದ ಶಾಸಕ ಕಳಲೆ ಎನ್.ಕೇಶವಮೂರ್ತಿ ಅವರ ಹೆಸರನ್ನು ಕೈ ಬಿಡುವ ಮೂಲಕ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ.

ಉಸ್ತುವಾರಿ ಸಚಿವರ ಕೈವಾಡ: ನುಡಿ ಜಾತ್ರೆಯ ಖರ್ಚಿಗಾಗಿ ಸರ್ಕಾರಿ 8 ಕೋಟಿ ಹಣ ನೀಡಿದ್ದು, ಈ ಹಣದಲ್ಲಿ ಸಮ್ಮೇಳನ ನಡೆಯುತ್ತಿದೆ. ಜೊತೆಗೆ ಆಹ್ವಾನ ಪತ್ರಿಕೆಯಲ್ಲಿ ಮೈಸೂರು ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳ ಹೆಸರನ್ನ ಹಾಕಲಾಗಿದ್ದು, ಆದರೆ ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಕಳಲೇ ಕೇಶವ ಮೂರ್ತಿ ಹೆಸರನ್ನ ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಕೈವಾಡ ಇದೆ ಎನ್ನಲಾಗಿದೆ. ಕಾರಣ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೇ ಮಾಡಲು ಸಿದ್ದರಿರುವ ಡಾ.ಹೆಚ್.ಸಿ ಮಹದೇವಪ್ಪ ಅವರಿಗೆ ಕೇಶವಮೂರ್ತಿ ಅಡಕಲಾಗಿದ್ದು, ಜೊತೆಗೆ ಕೇಶವಮೂರ್ತಿ ಸಿಎಂ ಸಿದ್ದರಾಮಯ್ಯ ಅಭಯವಿದೆ.

ಈ ಹಿನ್ನಲ್ಲೆಯಲ್ಲಿ ನಂಜನಗೂಡು ಅಭಿವೃದ್ದಿ ಕೆಲಸಗಳಿಗೆ ತೊಂದರೆ ಕೊಡುವ ಉಸ್ತುವಾರಿ ಸಚಿವರ ವರ್ತನೆಯ ಬಗ್ಗೆ ಶಾಸಕರು ಸಿಎಂಗೆ ದೂರು ನೀಡಿದ್ದು, ಈ ಎಲ್ಲಾ ಕಾರಣಗಳಿಂದ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರನ್ನ ಕೈಬಿಡಲಾಗಿದೆ ಎನ್ನಲಾಗಿದೆ.

 

See also  ಕಾಂಗ್ರೆಸ್‌ ಜತೆ ಸೇರಿ ಸರ್ಕಾರ ರಚಿಸುವಾಗ ಶಾಸಕರನ್ನು ಕೇಳಿರಲಿಲ್ಲ; ಜಿಟಿಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು