News Kannada
Wednesday, October 05 2022

ಮೈಸೂರು

ಕೆ.ಆರ್.ಪೇಟೆಯಲ್ಲಿ ಸಾಲಬಾಧೆಯಿಂದ ರೈತ ಆತ್ಮಹತ್ಯೆ - 1 min read

Photo Credit :

ಕೆ.ಆರ್.ಪೇಟೆಯಲ್ಲಿ ಸಾಲಬಾಧೆಯಿಂದ ರೈತ ಆತ್ಮಹತ್ಯೆ

ಕೆ.ಆರ್.ಪೇಟೆ: ಸಾಲದ ಬಾಧೆ ತಾಳಲಾರದೆ ರೈತನೊಬ್ಬ ಕ್ರಿಮಿನಾಶಕದ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತ್ರಿವೇಣಿ ಸಂಗಮದ ಬಳಿಯ ಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮರಿಚೇಗೌಡ ಅವರ ಪುತ್ರ ಲಕ್ಷ್ಮಣಗೌಡ(60) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ರೈತ ಲಕ್ಷ್ಮಣಗೌಡ ತನಗೆ ಸೇರಿದ ಒಂದು ಎಕರೆ ಜಮೀನನ್ನು ಆಧಾರವಾಗಿಟ್ಟು 2.60ಲಕ್ಷ ರೂ.ಗಳನ್ನು ಸಾಲವಾಗಿ ಪಡೆದು ಕೃಷಿ ಮಾಡಿದ್ದರು. ಇದಲ್ಲದೆ 3ಲಕ್ಷ ರೂ ಕೈಸಾಲ ಮಾಡಿಕೊಂಡಿದ್ದರು. ಮಳೆ ಮತ್ತು ಹಳ್ಳದ ನೀರನ್ನು ನಂಬಿ ಶುಂಠಿ ಬೆಳೆಗೆ ಬಂಡವಾಳ ಹಾಕಿದ್ದರು. ಆದರೆ ಸರಿಯಾಗಿ ಮಳೆ ಬಾರದ ಕಾರಣ ಶುಂಠಿ ಬೆಳೆ ಒಣಗಿ ಲಕ್ಷಾಂತರ ರೂ ನಷ್ಟವಾಗಿತ್ತು.

ಇದರಿಂದ ಮನನೊಂದ ಲಕ್ಷ್ಮಣಗೌಡ ಶುಂಠಿ ಬೆಳೆ ರಕ್ಷಣೆಗೆ ತಂದಿದ್ದ ಕ್ರಿಮಿನಾಶಕದ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಕೆ.ಆರ್.ನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಈಗಾಗಲೇ ರಾಜ್ಯದ ಬೇರೆಡೆಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಿದ್ದರೂ ಮಂಡ್ಯದಲ್ಲಿ ಮೇಲಿಂದ ಮೇಲೆ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಈಗಾಗಲೇ ನೂರಾರು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಲ್ಲುವ ಲಕ್ಷಣಗಳು ಮಾತ್ರ ಕಂಡು ಬರುತ್ತಿಲ್ಲ.

See also  ಮೈಸೂರಿನಲ್ಲಿ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿದ ಸಿ.ಎಂ.ಸಿದ್ದರಾಮಯ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು