News Kannada
Wednesday, October 05 2022

ಮೈಸೂರು

ಸಚಿವ ವಿನಯ ಕುಲಕರ್ಣಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ - 1 min read

Photo Credit :

ಸಚಿವ ವಿನಯ ಕುಲಕರ್ಣಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ಸಚಿವ ವಿನಯ ಕುಲಕರ್ಣಿ ರಾಜೀನಾಮೆಗೆ ಒತ್ತಾಯಿಸಿ ನಗರ ಬಿಜೆಪಿ ಕಾರ್ಯಕರ್ತರು ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್ ಗೌಡ ಅವರ ಕೊಲೆಯಲ್ಲಿ ಸಚಿವ ವಿನಯ ಕುಲಕರ್ಣಿ ಪಾತ್ರವಿದ್ದು, ಯೋಗೀಶ್ ಗೌಡ ಅವರ ಪರವಾಗಿ ವಾದ ಮಾಡುತ್ತಿರುವ ವಕೀಲ ಆನಂದ ಅವರಿಗೆ ಬೆದರಿಕೆ ಹಾಕಿರುವುದನ್ನು ವಿರೋದಿಸಿ ನಗರ ಬಿಜೆಪಿ ಕಾರ್ಯಕರ್ತರು ನಗರದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿ ಸಚಿವ ವಿನಯ್ ಕುಲಕರ್ಣಿ ರಾಜಿನಾಮೆಗೆ ಒತ್ತಾಯಿಸಿದರು.

ಇದೇ ಸಂಧರ್ಭದಲ್ಲಿ ಮಾತನಾಡಿದ ಬಿಜೆಪಿ ಕಾರ್ಯಕರ್ತರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯ ಸರ್ಕಾರ ಯಾವುದೇ ಕ್ರಮಕ್ಕೂ ಮುಂದಾಗದಿರುವುದು ರಾಜ್ಯದ ಜನರಲ್ಲಿ ತೀವ್ರ ಆತಂಕ ಮೂಡಿಸಿದೆ. ಹಲವಾರು ಪ್ರಕರಣಗಳ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿಲ್ಲ. ಜೊತೆಗೆ ಸರ್ಕಾರದಲ್ಲಿ ಸಚಿವರಾಗಿರುವವರೇ ಗಂಭೀರ ಆರೋಪದಲ್ಲಿ ಸಿಲುಕಿರುವುದು ರಾಜ್ಯದ ಜನತೆಯ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಂಪುಟದ ಸಚಿವರ ರಕ್ಷಣೆಗೆ ನಿಂತಿರುವುದು ಆಘಾತಕಾರಿ ಸಂಗತಿ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರ ಹೆಸರು ಡಿವೈಎಸ್ಪಿ ಸಾವಿನ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿ ಬಂದಿದ್ದು, ಸಿಬಿಐ ತನಿಖೆಯೂ ಆರಂಭಗೊಂಡಿದೆ. ಆದರೂ ಸಚಿವರು ಸಚಿವ ಸ್ಥಾನದಲ್ಲಿ ಮುಂದುವರಿದಿದ್ದಾರೆ ಎಂದು ಹೇಳಿದರು.

ಧಾರವಾಡ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ಗಣಿ ಮತ್ತು ಭೂವಿಜ್ಞಾನ ಖಾತೆಯ ಸಚಿವ ವಿನಯ್ ಕುಲಕರ್ಣಿ ಹೆಸರು ಕೇಳಿ ಬಂದಿದೆ. ಕೆಲವು ಸಾಕ್ಷ್ಯಾಧಾರಗಳು ಮಾಧ್ಯಮದ ಮೂಲಕ ಲಭ್ಯವಾಗಿದ್ದು, ಯೋಗೀಶ್ ಗೌಡ ಪರ ವಕೀಲರಿಗೆ ಬೆದರಿಕೆ ಹಾಕಿರುವ ಧ್ವನಿ ಸುರುಳಿ ಪ್ರಚಾರದಲ್ಲಿದೆ. ಅವರ ಕುಟುಂಬಿಕರು ನ್ಯಾಯಕ್ಕಾಗಿ ಮೊರೆ ಇಡುತ್ತಿದ್ದರೂ ರಾಜ್ಯ ಸರ್ಕಾರ ಅಹವಾಲನ್ನು ಕೇಳುತ್ತಿಲ್ಲ ಎಂದು ಆರೋಪಿಸಿ ಸಚಿವ ಕುಲಕರ್ಣಿ ವಿರುದ್ದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.

See also  ಆರೋಗ್ಯಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದ ರಾಕೇಶ್ ಅಭಿಮಾನಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು