News Kannada
Sunday, September 25 2022

ಮೈಸೂರು

ಹನುಮ ಮಾಲಾಧಾರಿಗಳ ಬಂಧನ: ಶೋಭಾ ಕರಂದ್ಲಾಜೆ ಪ್ರತಿಭಟನೆ - 1 min read

Photo Credit :

ಹನುಮ ಮಾಲಾಧಾರಿಗಳ ಬಂಧನ: ಶೋಭಾ ಕರಂದ್ಲಾಜೆ ಪ್ರತಿಭಟನೆ

ಮೈಸೂರು: ಹುಣಸೂರಿನಲ್ಲಿ ಹನುಮ ಮಾಲಾಧಾರಿಗಳನ್ನು ಹಾಗೂ ಸಂಸದ ಪ್ರತಾಪ್ ಸಿಂಹ ಬಂಧಿಸಿರುವುದನ್ನು ಖಂಡಿಸಿ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಇಂದು ನಗರದ ಗಾಂಧಿ ಪ್ರತಿಮೆ ಮುಂಭಾಗ ಜಮಾಯಿಸಿದ ಬಿಜೆಪಿಯ ನೂರಾರು ಕಾರ್ಯಕರ್ತರು ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿ ಬಂಧಿಸಿರುವ 58 ಜನ ಹನುಮ ಮಾಲಾಧಾರಿಗಳನ್ನು ಬಿಡುಗಡೆ ಮಾಡದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದೇ ಸಂಧರ್ಭದಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಹನುಮ ಜಯಂತಿ ಆಚರಣೆ ಶಾಂತಿಯುತವಾಗಿ ಮಾಡಲು ಭಕ್ತರು ಹುಣಸೂರಿಗೆ ಬಂದಿದ್ದರು. ಇದನ್ನು ತಡೆದು ಲಾಠಿ ಚಾರ್ಚ್ ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಇದರ ಪರಿಣಾಮವಾಗಿ ಹುಣಸೂರಿನಲ್ಲಿ ಮತ್ತು ಮೈಸೂರಿನಲ್ಲಿ ಗೊಂದಲವಾಗಿದೆ. ಹುಣಸೂರು ಸಂಸದ ಪ್ರತಾಪ್ ಸಿಂಹ ಅವರ ಕ್ಷೇತ್ರವಾಗಿದೆ. ಅವರು ರಾಜ್ಯದಲ್ಲಿ ಎಲ್ಲಿಗೆ ಬೇಕಾದರೂ ಹೋಗುವ ಅವಕಾಶವಿದೆ. ಅವರನ್ನು ಹುಣಸೂರಿಗೆ ಹೋಗುವ ಮಾರ್ಗ ಮಧ್ಯೆ ತಡೆದು ಬಂಧಿಸಿ 13 ಗಂಟೆಗಳ ಕಾಲ ಸುತ್ತಾಡಿಸಿ ನಂತರ ಬಿಡುಗಡೆ ಮಾಡಿರುವುದನ್ನು ನಾನು ಖಂಡಿಸುತ್ತೇನೆ. ರಾಜ್ಯ ಸರ್ಕಾರ ಮತ್ತು ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದ ಶೋಭಾ ಕರಂದ್ಲಾಜೆ, ಹನುಮಾನ ಮೆರವಣಿಗೆಯಲ್ಲಿ ಭಾಗವಹಿಸಲು ಮಾಲಾಧಾರಿಗಳು ಹುಣಸೂರಿಗೆ ಬಂದಿದ್ದರು. ಇವರ ಕೈಯಲ್ಲಿ ಯಾವುದೇ ತಲ್ವಾರ್, ಪಿಸ್ತೂಲ್ ಇರಲಿಲ್ಲ. ಇವರ ಶೀಘ್ರವಾಗಿ ಬಿಡುಗಡೆ ಮಾಡಿ ಹನುಮ ಜಯಂತಿ ಆಚರಣೆ ಮಾಡಲು ಅನುಮತಿ ನೀಡಿ ಸೂಕ್ತ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದರು.

See also  ಶುಶ್ರೂಷಕರು ವೈದ್ಯಕೀಯ ಕ್ಷೇತ್ರದ ರಾಯಭಾರಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು