News Kannada
Wednesday, October 05 2022

ಮೈಸೂರು

ಹೊಸ ವರ್ಷಾಚರಣೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷಿದ್ಧ - 1 min read

Photo Credit :

ಹೊಸ ವರ್ಷಾಚರಣೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷಿದ್ಧ

ಮೈಸೂರು: ನಗರದಲ್ಲಿ ಡಿಸೆಂಬರ್ 31ರ ರಾತ್ರಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಸೂಚನೆಗಳನ್ನು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ರಾತ್ರಿ 10 ಗಂಟೆಯ ನಂತರ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 31ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯನ್ನು ಮೈಸೂರು ನಗರದ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಗಳಲ್ಲಿ ಅಚರಿಸಲು ಮಧ್ಯರಾತ್ರಿ ಒಂದು ಗಂಟೆಯವರೆಗೆ ಅನುಮತಿ ನೀಡಲಾಗಿದ್ದು, ಒಂದು ಗಂಟೆ ಒಳಗಾಗಿ ಎಲ್ಲಾ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮುಕ್ತಾಯ ಮಾಡುಬೇಕು. ಈ ಅನುಮತಿಯನ್ನು ಸಿಎಲ್-2 ವರ್ಗದ ಮದ್ಯದ ಅಂಗಡಿಗಳಿಗೆ ನೀಡಲಾಗಿರುವುದಿಲ್ಲ.

ಮಧ್ಯರಾತ್ರಿ ಒಂದು ಗಂಟೆಯವರೆಗೆ ಮದ್ಯ ಸರಬರಾಜು ಮಾಡಬೇಕಾದಲ್ಲಿ ಅಬಕಾರಿ ಇಲಾಖೆಯ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುಬೇಕು. ಸದರಿ ಅನುಮತಿ ಪತ್ರದ ಪ್ರತಿಯನ್ನು ಸ್ಧಳೀಯ ಪೊಲೀಸ್ ಠಾಣೆಗೆ ಮಾಹಿತಿಗಾಗಿ ನೀಡಬೇಕು. ವಿಶೇಷ ಕಾರ್ಯಕ್ರಮಗಳನ್ನು ನಡೆಸುವ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳು ಪೊಲೀಸ್ ಆಯುಕ್ತರ ಕಚೇರಿಯಿಂದ ಕಡ್ಡಾಯವಾಗಿ ಕಾರ್ಯಕ್ರಮ ನಡೆಸಲು ಅನುಮತಿಯನ್ನು ಪಡೆದುಕೊಳ್ಳುಬೇಕು. ಧ್ವನಿವರ್ಧಕವನ್ನು ಅಳವಡಿಸುವವರು ತಮ್ಮ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವಂತೆ ಬಾಕ್ಸ್ ಮಾದರಿ ಧ್ವನಿವರ್ಧಕವನ್ನು ಅಳವಡಿಸಿಕೊಂಡು ಕಡಿಮೆ ಧ್ವನಿಯಲ್ಲಿ ಕಾರ್ಯಕ್ರಮವನ್ನು ನಡೆಸಬೇಕು ಮತ್ತು ಧ್ವನಿವರ್ಧಕ ಬಳಸಲು ಸಂಬಧಪಟ್ಟ ಪೊಲೀಸ್ ಠಾಣೆಗಳಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುಬೇಕು.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು, ರಸ್ತೆಯಲ್ಲಿ ಅತೀ ವೇಗವಾಗಿ ಮತ್ತು ನಿರ್ಲಕ್ಷ್ಯತೆಯಿಂದ ವಾಹನ ಚಾಲನೆ ಮಾಡುವುದು, ವೀಲಿಂಗ್ ಮತ್ತು ರೇಸಿಂಗ್ ಮಾಡುವುದು ಹಾಗೂ ಕಾರುಗಳಲ್ಲಿ ಅತಿಯಾಗಿ ಮ್ಯೂಸಿಕ್ ಹಾಕಿಕೊಂಡು ಹೋಗುವುದನ್ನು ಗಂಭೀರವಾಗಿ ಪರಿಗಣಿಸಿ ಅಂತವರ ಮೇಲೆ ಕಾನೂನಿನ ರೀತ್ಯಾ ಕ್ರಮ ಜರುಗಿಸಲಾಗುವುದು. ಹೊಸ ವರ್ಷವನ್ನು ಆಚರಿಸುವವರು ದಿನಾಂಕ 31-12-2017ರ ರಾತ್ರಿ ಹೊಸ ವರ್ಷ ಆಚರಣೆ ನೆಪದಲ್ಲಿ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರನ್ನು/ಮಹಿಳೆಯರನ್ನು ಬಲವಂತವಾಗಿ ನಿಲ್ಲಿಸಿ ಅವರ ಇಚ್ಚೆಗೆ ವಿರುದ್ದವಾಗಿ ಶುಭ ಕೋರಿ ತೊಂದರೆ ಮಾಡಬಾರದು. ಅಂತಹವರ ವಿರುದ್ದ ಕ್ರಮ ಜರುಗಿಸಲಾಗುವುದು.

ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲ ನೃತ್ಯಗಳನ್ನು ಆಯೋಜಿಸುವುದು ಮತ್ತು ಮಾಡುವುದನ್ನು ಹಾಗೂ ಜೂಜಾಟವನ್ನು ನಿರ್ಬಂಧಿಸಿದ್ದು, ಹೊಸ ವರ್ಷಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸುವ ಹೋಟೆಲ್ /ರೆಸ್ಟೋರೆಂಟ್ ಹಾಗೂ ಕ್ಲಬ್ ಗಳಲ್ಲಿ ಮಂಜಾಗ್ರತಾ ಕ್ರಮವಾಗಿ ಸೂಕ್ತ ಖಾಸಗಿ ಭದ್ರತಾ ಸಿಬ್ಬಂದಿ ನಿಯೋಜಿಸಿಕೊಳ್ಳಬೇಕು. ಹೊಸ ವರ್ಷಾಚರಣೆ ಮುಗಿದ ನಂತರ ಆ ವೇಳೆಯಲ್ಲಿ ಸಾರ್ವಜನಿಕರು ತಮ್ಮ ಮನೆಗಳಿಗೆ ಟ್ಯಾಕ್ಸಿ/ಆಟೋ ರಿಕ್ಷಾಗಳಲ್ಲಿ ತೆರಳುವಾಗ ಇವುಗಳ ಚಾಲಕರುಗಳು ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿದರೆ ಹಾಗೂ ಹೆಚ್ಚು ಚಾಡಿಗೆಗೆ ಒತಾಯಿಸುವುದು ಮತ್ತು ಬಾಡಿಗೆ ಬರಲು ನಿರಾಕರಿಸಿದರೆ ಪೊಲೀಸ್ ಕಂಟ್ರೋಲ್ ರೂಂಗೆ ಈ ಕುರಿತು ಆ ವಾಹನದ ನೋಂದಣಿ ಸಂಖ್ಯೆಯೊಂದಿಗೆ ಮಾಹಿತಿ ನೀಡಬೇಕು. ಒಂಟಿಯಾಗಿ ಆಟೋ, ಕ್ಯಾಬ್ ಇತ್ಯಾದಿಗಳಲ್ಲಿ ಪ್ರಯಾಣಿಸುವಾಗ ಅವುಗಳ ನೋಂದಣಿ ಸಂಖ್ಯೆಯನ್ನು ಹತ್ತಿರದ ಸಂಬಂಧಿಕರಿಗೆ ತಿಳಿಸಿ ಪ್ರಯಾಣ ಆರಂಭಿಸಬೇಕು. ವರ್ಷಾಚರಣೆಗೆ ಹೋಗುವಾಗ ಹೆಚ್ಚು ಆಭರಣ ಮತ್ತು ನಗದು ಹಣವನ್ನು ಕೊಂಡೊಯ್ಯಬಾರದು. ವರ್ಷಾಚರಣೆಗೆ ನಿಮ್ಮ ಚಿಕ್ಕ ಮಕ್ಕಳೊಟ್ಟಿಗೆ ಹೋದಲ್ಲಿ ಮಕ್ಕಳ ಬಗ್ಗೆ ಎಚ್ಚರವಿರಲಿ. ನಿರ್ಜನ ಪ್ರದೇಶಗಳಲ್ಲಿ ಸಂಚರಿಸುವಾಗ ಒಂಟಿಯಾಗಿ ತೆರಳದಿರಿ. ಇಂತಹ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ಹೋಗದಿರಿ. ವಿಶೇಷವಾಗಿ ಮಹಿಳೆಯರು ಒಂಟಿಯಾಗಿ ತೆರಳಬಾರದು. ಆ ವೇಳೆಯಲ್ಲಿ ಅಪರಿಚಿತರೊಂದಿಗೆ ಅವರ ಖಾಸಗಿ ವಾಹನದಲ್ಲಿ ಡ್ರಾಪ್ ತೆಗೆದುಕೊಳ್ಳಬಾರದು. ವರ್ಷಾಚರಣೆಗೆ ಬರುವಾಗ ನಿಮ್ಮ ಮನೆಗಳಲ್ಲಿ ಯಾರೂ ಇಲ್ಲದಿದ್ದಲ್ಲಿ ನಿಮ್ಮ ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿ ಇಟ್ಟು ಬರುವ ವ್ಯವಸ್ಥೆ ಮಾಡಬೇಕು.

See also  ಮನೆಯಲ್ಲಿಯೇ ಕುಟುಂಬದ ಜೊತೆ ವಿಶ್ವ ಯೋಗ ದಿನ ಆಚರಿಸೋಣ: ಅಭಿರಾಂ. ಜಿ ಶಂಕರ್

ನಗರದಾದ್ಯಂತ ಪೊಲೀಸ್ ಬಿಗಿ ಪೊಲೀಸ್ ಬಂದೂಬಸ್ತ್
ಡಿಸೆಂಬರ್ 31ರಂದು ರಾತ್ರಿ ಮೈಸೂರು ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ನಗರದ ಎಲ್ಲಾ ಸಂಚಾರ ಮತ್ತು ಕಾನೂನು ವಿಭಾಗದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮತ್ತು ಪೊಲೀಸ್ ಗಸ್ತು ವಾಹನಗಳು ಎಲ್ಲಾ ಕಡೆ ಕಾರ್ಯ ಪ್ರವೃತ್ತರಾಗಿರುತ್ತಾರೆ. ಸಾರ್ವಜನಿಕರಿಗೆ ಹೊಸ ವರ್ಷಾಚರಣೆಯ ಸಮಯದಲ್ಲಿ ಯಾರಿಂದಲಾದರೂ ತೊಂದರೆಗಳು ಆದಲ್ಲಿ ನಗರ ಪೊಲೀಸ್ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ: 0821-2418339, 0821-2418139, 100ಗೆ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಸಂರ್ಪಕಿಸಬಹುದಾಗಿದೆ.

ಚಾಮುಂಡಿ ಬೆಟ್ಟಕ್ಕೆ ವಾಹನಗಳ ನಿಷೇಧ
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ದಿನಾಂಕ: 31-12-2017ರ ರಾತ್ರಿ 9-00 ಗಂಟೆಯಿಂದ ದಿನಾಂಕ: 01/01/2018ರ ಬೆಳಿಗ್ಗೆ 05-30 ಗಂಟೆಯವರೆಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇದು ಚಾಮುಂಡಿ ಬೆಟ್ಟದಲ್ಲಿ ವಾಸಿಸುವವರಿಗೆ ಅನ್ವಯಿಸುವುದಿಲ್ಲ. ಹೊಸವರ್ಷಾಚರಣೆಯ ನೆಪದಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ರೀತಿಯಲ್ಲಿ ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದ್ದು, ಪಾರ್ಕ್ ಗಳಲ್ಲಿ, ರಸ್ತೆಗಳಲ್ಲಿ, ಮೈದಾನಗಳಲ್ಲಿ ಮತ್ತು ವಾಹನಗಳ ಒಳಗಡೆ ಕುಳಿತು ಮದ್ಯಪಾನ ಮಾಡುವುದನ್ನು ನಿಷೇಧಿಸಲಾಗಿರುತ್ತದೆ.

ಯಾವುದೇ ರೀತಿಯ ಅಹಿತಕರ ಘಟನೆಗಳು ಆಗದಂತೆ 2018ನೇ ವರ್ಷವನ್ನು ಸ್ವಾಗತಿಸಲು ಮೇಲ್ಕಂಡ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪೊಲೀಸರೊಂದಿಗೆ ಸಹಕರಿಸಬೇಕೆಂದು ಪೊಲೀಸ್ ಆಯುಕ್ತರವರಾದ ಡಾ. ಎ.ಸುಬ್ರಹ್ಮಣ್ಯೇಶ್ವರ ರಾವ್ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು