News Kannada
Saturday, October 01 2022

ಮೈಸೂರು

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ರೈತರ ಕಡೆಗಣನೆ - 1 min read

Photo Credit :

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ರೈತರ ಕಡೆಗಣನೆ

ಮೈಸೂರು: ಉದ್ಯಮಿಗಳ ಸಾಲಮನ್ನಾ ಮಾಡುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ರೈತರನ್ನು ಸಂಪೂರ್ಣ ಕಡೆಗಣಿಸಿದೆ ಎಂದು ವಿಧಾನಪರಿಷತ್ ಸದಸ್ಯ ಧರ್ಮಸೇನಾ ಹೇಳಿದರು.

ಕೆ.ಆರ್.ನಗರ ತಾಲೂಕಿನ ಹೊಸಅಗ್ರಹಾರ ಹೋಬಳಿ ಕಂಚಿನಕೆರೆ ಗ್ರಾಮದಲ್ಲಿ ಏರ್ಪಡಿಸಿದ್ದ ಹೋಬಳಿ ಮಟ್ಟದ ಮನೆ-ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯಸರಕಾರ ಸಹಕಾರ ಸಂಘದಲ್ಲಿನ ರೈತರ 50ಸಾವಿರ ರೂ. ಬೆಳೆಸಾಲ ಮನ್ನಾ ಮಾಡಿ ಅವರ ನೆರವಿಗೆ ಬಂದಿದೆ. ಆದರೆ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲಮನ್ನಾ ಮಾಡಲು ಕೇಂದ್ರ ಸರಕಾರ ಮೀನಾಮೇಷ ಎಣಿಸುತ್ತಿದೆ ಎಂದು ದೂರಿದ ಅವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು 70 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ್ದರು, ಆದರೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅನ್ನದಾತನ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ದೂರಿದರು.

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ, ಸಂಸದ ಪ್ರತಾಪ್ ಸಿಂಹ ಅವರು ಜವಾಬ್ದಾರಿ ಸ್ಥಾನದಲ್ಲಿದ್ದು, ಮಾಡುವ ಕೆಲಸ ಬಿಟ್ಟು ಅಶಾಂತಿ ಸೃಷ್ಟಿ ಮಾಡುತ್ತಿದ್ದಾರೆ. ಕಾಂಗ್ರೆಸ್ ದೇಶದ ಸಂವಿಧಾನವನ್ನು ಗೌರವಿಸಿ ಆಡಳಿತ ನಡೆಸಿದೆ. ಆದರೆ ಬಿಜೆಪಿಯು ಎಲ್ಲಾ ವರ್ಗದ ಹಿತ ಅಡಗಿರುವ ಸಂವಿಧಾನವನ್ನು ಬದಲಾಯಿಸಬೇಕೆಂಬ ಧೋರಣೆ ಹೊಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ಪಕ್ಷದಲ್ಲಿದ್ದ ಮಾಜಿ ಸಂಸದ ಹೆಚ್.ವಿಶ್ವನಾಥ್ ಅವರಿಗೆ ಕಾಂಗ್ರೆಸ್ ಎಂದೂ ದ್ರೋಹ ಮಾಡಿಲ್ಲ. ಎಲ್ಲ ವಿಧದಲ್ಲೂ ಅವರಿಗೆ ಸ್ಥಾನಮಾನ ನೀಡಿದ್ದು, ಅವರೇ ಪಕ್ಷಕ್ಕೆ ದ್ರೋಹವೆಸುಗುವ ಕೆಲಸ ಮಾಡಿದ್ದಾರೆ. ಅವರ ತಪ್ಪಿನಿಂದ ಕಾಂಗ್ರೆಸ್ ತೊರೆದು ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರಿಗೆ ಈ ಸ್ಥಿತಿ ಬರಬಾರದಿತ್ತು. ಅವರಿಗೆ ತಮ್ಮ ತಪ್ಪಿನ ಅರಿವಾಗಿ ಮರಳಿ ಕಾಂಗ್ರೆಸ್ ಸೇರ್ಪಡೆಯಾದರೆ ಯಾವುದೇ ಆಶ್ಚರ್ಯವಿಲ್ಲ ಎಂದರು.

See also  ಅರೋಗ್ಯ ಸಿಬ್ಬಂದಿ ಮೇಲೆ ಹಲ್ಲೆಗೆ ಡಿಸಿ ಖಡಕ್‌ ವಾರ್ನಿಂಗ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು