News Kannada
Saturday, October 01 2022

ಮೈಸೂರು

ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ - 1 min read

Photo Credit :

ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ

ಮೈಸೂರು: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್, ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ್ 23ರಿಂದ ಏಪ್ರಿಲ್ 6ರವರೆಗೆ ರಾಜ್ಯದ ಎಲ್ಲಾ ಕೇಂದ್ರಗಳಲ್ಲಿ ಪರೀಕ್ಷಾ ನಡೆಯುತ್ತಿದೆ. ಯಾವುದೇ ಗೊಂದಲವಿಲ್ಲದಂತೆ ಪರೀಕ್ಷೆ ನಡೆಸಲು ಸಾಕಷ್ಟು ಕ್ರಮಗಳನ್ನು ಈ ಬಾರಿ ಕೈಗೊಳ್ಳಲಾಗಿದ್ದು, ಕಡ್ಡಾಯವಾಗಿ ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಸೂಚನೆ ನೀಡಲಾಗಿದೆ ಎಂದರು.

ಮಾರ್ಚ್ 1 ರಿಂದ 17ರವರೆಗೆ ಪಿಯುಸಿ ಪರೀಕ್ಷೆ ನಡೆಯಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವ್ಯಸ್ಥೆಯಡಿ ಪ್ರಶ್ನೆ ಪತ್ರಿಕೆಗಳನ್ನು ಸರಬರಾಜು ಮಾಡಲಾಗುವುದು. ಜೊತೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ ಕೊನೆಯ ವಾರದಲ್ಲಿ ಮತ್ತು ಪಿಯುಸಿ ಫಲಿತಾಂಶವನ್ನು ಏಪ್ರಿಲ್ ಮೂರನೇ ವಾರದಲ್ಲಿ ನೀಡಲಾಗುವುದು ಎಂದರು.

See also  ಮೈಸೂರಿನ ತಾಯಿ, ಮಕ್ಕಳಿಬ್ಬರು ಐರ್ಲೆಂಡ್‌ನಲ್ಲಿ ನಿಗೂಢ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

181
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು